ಕೊರಟಗೆರೆ: ತಾಲ್ಲೂಕಿನಲ್ಲಿ ಪೂರ್ವ ಮುಂಗಾರು ಕೊರತೆಯಿಂದ ಬರದ ಛಾಯೆ ಆವರಿಸಿದೆ. ಮೇ ತಿಂಗಳು ಅಂತ್ಯಕ್ಕೆ ಬಂದರೂ ತಾಲ್ಲೂಕಿನಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ.

ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆಗಳು ನಡೆಯುತ್ತಿದ್ದು, ಮಕ್ಕಳು ‘ಮಳೆರಾಯ’ನ ಮೊರೆ ಹೋಗಿರುವ ದೃಶ್ಯ ಸಾಮಾನ್ಯವಾಗಿದೆ. ಪಟ್ಟಣದಲ್ಲಿ ಮಕ್ಕಳ ಗುಂಪೊಂದು ಜೇಡಿ ಮಣ್ಣಿನಿಂದ ಮಳೆರಾಯನ ಮೂರ್ತಿ ನಿರ್ಮಿಸಿ, ಎರಡು ದಿನಗಳಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಮನೆ ಮನೆಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ‘ಮಳೆ ಬರಲಿ, ಭೂಮಿ ತಂಪಾಗಲಿ’ ಎಂದು ಪ್ರಾರ್ಥಿಸಿದ್ದಾರೆ.

ಕೃಷಿ ಚಟುವಟಿಕೆಗಳಿಗೆ ಸಾಕಷ್ಟು ಮಳೆಯಾಗದ ಕಾರಣ ಬಿತ್ತನೆ ಮುಂದೂಡಲಾಗಿದೆ. ಮಳೆಯನ್ನೇ ಆಶ್ರಯಿಸಿ ಬದುಕು ಸಾಗಿಸುವ ರೈತರು ಆಕಾಶದತ್ತ ದೃಷ್ಟಿ ನೆಟ್ಟಿದ್ದಾರೆ. ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-17-475248990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.