ಕೊರಟಗೆರೆ: ಎರಡು ದಿನಗಳಿಂದ ಸುರಿದ ರೋಹಿಣಿ ಮಳೆ ಭೂಮಿಯನ್ನು ತಂಪೆರೆದಿದೆ. ಮಳೆಯ ಆಗಮನದಿಂದ ವಾತಾವರಣ ತಂಪಾಗಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಬಾರಿ ಮುಂಗಾರು ಪೂರ್ವ ಮಳೆ ತಡವಾದ ಕಾರಣ ರೈತರು ಆತಂಕದಲ್ಲಿದ್ದರು. ಬಿತ್ತನೆ ಕಾರ್ಯ ಆರಂಭಿಸಲು ಮಳೆಯ ನಿರೀಕ್ಷೆಯಲ್ಲಿದ್ದ ರೈತಾಪಿ ವರ್ಗಕ್ಕೆ ರೋಹಿಣಿ ಮಳೆ ಆಶಾಕಿರಣವಾಗಿ ಪರಿಣಮಿಸಿದೆ. ಉತ್ತಮ ಪ್ರಮಾಣದಲ್ಲಿ ಸುರಿದ ಮಳೆಯಿಂದ ಹೊಲಗಳಲ್ಲಿ ತೇವಾಂಶ ಹೆಚ್ಚಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ.

ಕಳೆದ ಕೆಲ ವಾರಗಳಿಂದ ತೀವ್ರ ಬಿಸಿಲಿಗೆ ಭೂಮಿ ಒಣಗಿಹೋಗಿತ್ತು. ಕೆರೆ–ಕಟ್ಟೆ ಹಾಗೂ ಕೃಷಿ ಭೂಮಿಗಳಲ್ಲಿ ನೀರಿನ ಕೊರತೆ ಎದುರಾಗಿತ್ತು. ಇದೀಗ ಸುರಿದ ಮಳೆಯಿಂದ ಭೂಮಿಯ ತಾಪಮಾನ ಕಡಿಮೆಯಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ತಂಪಾದ ವಾತಾವರಣ ಕಂಡುಬಂದಿದೆ.

ರೈತರು ಬಿತ್ತನೆಗೆ ಅಗತ್ಯ ಸಿದ್ಧತೆ ಆರಂಭಿಸಿದ್ದಾರೆ. ಜಮೀನು ಉಳುಮೆ ಮಾಡುವುದು, ಭೂಮಿಯನ್ನು ಹದಗೊಳಿಸುವುದು ಸೇರಿದಂತೆ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಮುಂಗಾರು ಸಹ ಇದೇ ರೀತಿ ಮುಂದುವರಿದರೆ ಉತ್ತಮ ಬೆಳೆ ನಿರೀಕ್ಷಿಸಬಹುದು ಎಂಬ ವಿಶ್ವಾಸವನ್ನು ರೈತರು ವ್ಯಕ್ತಪಡಿಸಿದ್ದಾರೆ.

ರೋಹಿಣಿ ಮಳೆ ಉತ್ತಮವಾಗಿ ಸುರಿದಿರುವುದರಿಂದ ಮುಂಗಾರು ಕೃಷಿಗೆ ಉತ್ತಮ ಮುನ್ನುಡಿ ದೊರೆತಿದೆ. ಮುಂದಿನ ದಿನಗಳಲ್ಲಿಯೂ ಸಮರ್ಪಕ ಮಳೆಯಾದರೆ ಬಿತ್ತನೆ ಕಾರ್ಯ ವೇಗ ಪಡೆದು ಕೃಷಿ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳಲಿವೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-17-385223953

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.