ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಗುರುವಾರ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಮರ, ವಿದ್ಯುತ್ ಕಂಬಗಳು ಉರುಳಿವೆ.

ಅಡಿಕೆ, ತೆಂಗು ಹಾಗೂ ಬಾಳೆ ಬೆಳೆಗಳಿಗೆ ಅಪಾರ ಹಾನಿಯಾಗಿದ್ದು, ಇಪ್ಪತ್ತಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಉರುಳಿದ ಪರಿಣಾಮ ಹೋಬಳಿ ವ್ಯಾಪ್ತಿಯ ಬಹುತೇಕ ಗ್ರಾಮಗಳು ರಾತ್ರಿ ಇಡೀ ಕತ್ತಲಲ್ಲಿ ಮುಳುಗಿದ್ದವು.

ಏಕಾಏಕಿ ಬಿರುಗಾಳಿ ಬೀಸಿದ ಪರಿಣಾಮ ಹಲವೆಡೆ ರಸ್ತೆ ಬದಿಯ ಮರಗಳು ರಸ್ತೆಗೆ ಅಡ್ಡವಾಗಿ ಬಿದ್ದವು. ಕೆಲವೆಡೆ ಮರದ ಕೊಂಬೆಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದು ಕಂಬಗಳು ಮುರಿದು ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿತ್ತು. ಹೊಳವನಹಳ್ಳಿ ಸುತ್ತಲಿನ ಗ್ರಾಮಗಳು ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರು ಇಡೀ ರಾತ್ರಿ ಕತ್ತಲಲ್ಲೇ ಕಾಲ ಕಳೆಯುವಂತಾಯಿತು.

ಬಿರುಗಾಳಿಯ ತೀವ್ರತೆಗೆ ಅಡಿಕೆ, ತೆಂಗು ಹಾಗೂ ಬಾಳೆ ತೋಟಗಳಲ್ಲಿ ದೊಡ್ಡ ಪ್ರಮಾಣದ ನಷ್ಟ ಸಂಭವಿಸಿದೆ. ಹಲವೆಡೆ ಫಲಕೊಡುತ್ತಿದ್ದ ತೆಂಗಿನ ಮರಗಳು ಬೇರು ಸಹಿತ ಉರುಳಿ ಬಿದ್ದಿದ್ದು, ಬಾಳೆ ಗಿಡಗಳು ನೆಲಕ್ಕೊರಗಿವೆ. ಇದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಈಗಾಗಲೇ ಮಳೆ ಕೊರತೆ ಹಾಗೂ ಬೆಳೆ ಹಾನಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ಈ ಅಕಾಲಿಕ ಗಾಳಿ–ಮಳೆ ಮತ್ತಷ್ಟು ಹೊರೆ ತಂದಿದೆ ಎಂದು ರೈತರು ಬೇಸರ ವ್ಯಕ್ತಪಡಿಸಿದರು.

ರಸ್ತೆಗಳಿಗೆ ಮರಗಳು ಅಡ್ಡವಾಗಿ ಬಿದ್ದ ಪರಿಣಾಮ ವಾಹನ ಸಂಚಾರವೂ ಕೆಲಕಾಲ ಸ್ಥಗಿತಗೊಂಡಿತ್ತು. ಗ್ರಾಮೀಣ ಭಾಗಗಳಲ್ಲಿ ರಾತ್ರಿ ವೇಳೆ ಪ್ರಯಾಣಿಸುತ್ತಿದ್ದ ವಾಹನ ಸವಾರರು ಪರದಾಡುವಂತಾಯಿತು. ಕೆಲವೆಡೆ ಗ್ರಾಮಸ್ಥರೇ ಸೇರಿ ಮರದ ಕೊಂಬೆಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಶುಕ್ರವಾರ ಬೆಳಗ್ಗಿನಿಂದಲೇ ಬೆಸ್ಕಾಂ ಸಿಬ್ಬಂದಿ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಮುರಿದು ಬಿದ್ದ ವಿದ್ಯುತ್ ಕಂಬ, ತಂತಿ ಹಾಗೂ ಮರಗಳನ್ನು ತೆರವುಗೊಳಿಸಿದರು. ಹಲವು ಗ್ರಾಮಗಳಲ್ಲಿ ಸಂಜೆ ವೇಳೆಗೆ ವಿದ್ಯುತ್ ಸಂಪರ್ಕ ಮತ್ತೆ ಆರಂಭವಾಗಿ ಕೆಲವು ಗ್ರಾಮಗಳಲ್ಲಿ ದುರಸ್ತಿ ಕಾರ್ಯ ಮುಂದುವರಿದಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-17-1367213018

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.