ಕೊರಟಗೆರೆ: ಪಟ್ಟಣದ ಅಪ್ಪು ಸರ್ಕಲ್ ಸಮೀಪ ಬೀದಿ ನಾಯಿಗಳ ಹಾವಳಿಗೆ ಕರುವೊಂದು ಮೃತಪಟ್ಟಿದೆ.

ಪಟ್ಟಣದ 5ನೇ ವಾರ್ಡ್ ನಿವಾಸಿ ನಿಸಾರ್ ಅಹಮದ್ ಅವರಿಗೆ ಸೇರಿದ ಕರುವನ್ನು ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ಕಚ್ಚಿದ ಪರಿಣಾಮ, ಕರು ಗಂಭೀರವಾಗಿ ಗಾಯಗೊಂಡು ಕೆಳಗೆ ಬಿದ್ದಿದೆ. ನಂತರ ನಾಯಿಗಳು ಕರುವಿನ ಹೊಟ್ಟೆ ಭಾಗ ಕಚ್ಚಿ ತಿಂದಿದೆ.

ಕರುವಿನ ಮೌಲ್ಯ ₹15 ಸಾವಿರ ಎಂದು ಅಂದಾಜಿಸಲಾಗಿದೆ.

ಬೀದಿ ನಾಯಿಗಳ ನಿಯಂತ್ರಣಕ್ಕೆ ಹಲವು ಬಾರಿ ಪುರಸಭೆಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಸೂಕ್ತ ಕ್ರಮ ಕೈಗೊಂಡು ಬೀದಿ ನಾಯಿ ಹಾವಳಿಯನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-17-1315683878

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.