ಕೊರಟಗೆರೆ: ತಾಲ್ಲೂಕಿನ ಬೈರೇನಹಳ್ಳಿ ಕ್ರಾಸ್ ಬಳಿ ಶನಿವಾರ ರಸ್ತೆ ಬದಿಯ ಅಂಗಡಿ ಮುಂದೆ ನಿಂತಿದ್ದ ನಾಲ್ವರ ಮೇಲೆ ಮಿನಿ ಟೆಂಪೊ ವಾಹನ ಹರಿದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.

ಬೈರೇನಹಳ್ಳಿಯ ನವೀನ್ಕುಮಾರ್ (21), ನಕುಲ್ (21) ಮೃತರು. ಭಾಗ್ಯಮ್ಮ (50), ರಾಮಕೃಷ್ಣಯ್ಯ (55) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನವೀನ್ ಸ್ಥಳದಲ್ಲೇ ಮೃತಪಟ್ಟಿದ್ದು, ನಕುಲ್ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಗೌರಿಬಿದನೂರು ಕಡೆಯಿಂದ ಬರುತ್ತಿದ್ದ ಮಿನಿ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಅಂಗಡಿ ಬಳಿನಿಂತಿದ್ದವರ ಮೇಲೆ ಹರಿದಿದೆ. ಘಟನೆ ನಂತರ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.