ಕೊರಟಗೆರೆ: ತಾಲ್ಲೂಕಿನ ವಡೇರಹಳ್ಳಿಯಲ್ಲಿ ಎತ್ತಿನಹೊಳೆ ಯೋಜನೆ ಅಡಿ ಅಣೆಕಟ್ಟು ನಿರ್ಮಾಣ ಪ್ರಸ್ತಾವ ವಿರೋಧಿಸಿ ಸುತ್ತಲಿನ ರೈತರು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ತಾಲ್ಲೂಕಿನ ಕೊಳಾಲ ಹೋಬಳಿ ವ್ಯಾಪ್ತಿಯ ವಡೇರಹಳ್ಳಿ, ಸುಂಕದಹಳ್ಳಿ, ಕಾಟೇನಹಳ್ಳಿ, ಅಂಕೇನಹಳ್ಳಿ, ನರಸಾಪುರ, ಭೋವಿಪಾಳ್ಯ, ಬೆಣಚಿಹಳ್ಳಿ ಸೇರಿದಂತೆ ಸುತ್ತಲಿನ ಗ್ರಾಮಗಳ ರೈತರು ವಡೇರಹಳ್ಳಿ ಬಳಿ ನಿರ್ಮಿಸಲು ಉದ್ದೇಶಿಸಿರುವ ಎತ್ತಿನಹೊಳೆ ಅಣೆಕಟ್ಟು ಯೋಜನೆ ಕೈಬಿಡುವಂತೆ ಆಗ್ರಹಿಸಿದರು.

ಈ ಹಿಂದೆ ಬೈರಗೊಂಡ್ಲು ಗ್ರಾಮದ ಬಳಿ ಅಣೆಕಟ್ಟು ನಿರ್ಮಿಸಲು ಸರ್ಕಾರ ಮುಂದಾಗಿತ್ತು. ಅಲ್ಲಿನ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಈಗ ವಡೇರಹಳ್ಳಿ ಭಾಗದಲ್ಲಿ ಡ್ಯಾಂ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಆದರೆ ಇದರಿಂದ ಹಲವು ಗ್ರಾಮಗಳ ರೈತರು ಭೂಮಿ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಲಿದೆ. ಕೃಷಿ ಜಮೀನು, ಮನೆ, ಅರಣ್ಯ ನಾಶ ಹಾಗೂ ಜನಜೀವನಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಯೋಜನೆಯನ್ನು ಕೈಬಿಟ್ಟು ಸ್ಥಳೀಯ ರೈತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದರು.

‘ನಮ್ಮ ಗ್ರಾಮ ಸೇರಿದಂತೆ ಸುತ್ತಲಿನ ಹಲವು ಹಳ್ಳಿಗಳ ರೈತರು ತಲೆಮಾರುಗಳಿಂದ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದೇವೆ. ಡ್ಯಾಂ ನಿರ್ಮಾಣವಾದರೆ ನಮ್ಮ ಜಮೀನುಗಳು ನೀರಿನಲ್ಲಿ ಮುಳುಗಡೆಯಾಗುತ್ತವೆ. ರೈತರ ಬದುಕನ್ನೇ ಕತ್ತಲೆಗೆ ತಳ್ಳುವ ಯೋಜನೆಯನ್ನು ಸರ್ಕಾರ ಕೈಬಿಡಬೇಕು’ ಎಂದು ರೈತ ಡಿ.ಎಲ್.ಕೆಂಪರಾಜು ಆಗ್ರಹಿಸಿದರು.

ಬೈರಗೊಂಡ್ಲು ಭಾಗದಲ್ಲಿ ವಿರೋಧ ವ್ಯಕ್ತವಾದ ಕಾರಣ ಈಗ ನಮ್ಮ ಭಾಗವನ್ನು ಆಯ್ಕೆ ಮಾಡಲಾಗಿದೆ. ಒಂದು ಭಾಗದ ರೈತರ ಬದುಕು ಉಳಿಸಲು ಮತ್ತೊಂದು ಭಾಗದ ರೈತರನ್ನು ಬಲಿಕೊಡುವುದು ಸರಿಯಲ್ಲ. ಇದೊಂದು ದೊಡ್ಡ ರಾಜಕೀಯ ಕುತಂತ್ರ. ಯಾವುದೇ ಕಾರಣಕ್ಕೂ ಅಣೆಕಟ್ಟು ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ರೈತ ಹನುಮಂತೇಗೌಡ ಎಚ್ಚರಿಸಿದರು.

ನಂಜೇಗೌಡ ಮಾತನಾಡಿ, ‘ವಡೇರಹಳ್ಳಿ ಬಳಿ ಡ್ಯಾಂ ನಿರ್ಮಾಣ ಅವೈಜ್ಞಾನಿಕ. ಪ್ರಾಣ ಬೇಕಾದರೂ ಕೊಡುತ್ತೇವೆ ಆದರೆ ಇಲ್ಲಿ ಡ್ಯಾಂ ನಿರ್ಮಾಣಕ್ಕೆ ನಾವು ಭೂಮಿ ಬಿಡುವುದಿಲ್ಲ. ಸರ್ಕಾರ ಇದನ್ನು ಮತ್ತೊಮ್ಮೆ ಪರಿಶೀಲಿಸಿ ಇಲ್ಲಿನ ರೈತರ ಹಿತ ಕಾಪಾಡಬೇಕು’ ಎಂದು ಮನವಿ ಮಾಡಿದರು.

ಪಟ್ಟಣದ ಹೊರವಲಯದ ಕನಕದಾಸ ವೃತ್ತದಲ್ಲಿ ಸಮಾವೇಶಗೊಂಡ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಬಳಿಕ ಕಾಲ್ನಡಿಗೆಯಲ್ಲಿ ಶಾಂತಿಯುತ ಮೆರವಣಿಗೆ ನಡೆಸಿದರು. ತಹಶೀಲ್ದಾರ್ ಕಚೇರಿವರೆಗೆ ತೆರಳಿ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ನೂರಾರು ರೈತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-17-190470337

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.