ಮಂಗಳವಾರ, ಜೂನ್ 2, 2020
27 °C

ದೆಹಲಿಗೆ ಹೋಗಿದ್ದ ಯುವಕರು: ಆತಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರಟಗೆರೆ: ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಮಾರ್ಚ್‌ 13ರಿಂದ ಮಾರ್ಚ್‌ 15ರವರೆಗೆ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ಪಟ್ಟಣದ ಮೂವರು ಮುಸ್ಲಿಂ ಯುವಕರು ಭಾಗವಹಿಸಿ ವಾಪಸಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಬುಧವಾರ ಹರಿದಾಡಿದ್ದು, ಜನರನ್ನು ಆತಂಕಕ್ಕೆ ದೂಡಿದೆ.

ದೆಹಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿದ್ದ ಯುವಕರು ತಮ್ಮ ಫೇಸ್‌ಬುಕ್ ಖಾತೆಗಳಲ್ಲಿ ದೆಹಲಿಗೆ ಹೋಗಿದ್ದ ಹಾಗೂ ವಾಪಸ್ ಬಂದದ್ದನ್ನು ಫೋಟೊ ಸಮೇತ ಹಾಕಿದ್ದನ್ನು ಕೆಲವರು ಸ್ಕ್ರೀನ್ ಶಾಟ್ ಮಾಡಿ ವಾಟ್ಸ್‌ಆಪ್‌ ಹಾಗೂ ಫೇಸ್‌ಬುಕ್ ಖಾತೆಗಳಲ್ಲಿ ಹಾಕಿದ್ದರು.

ಬೆಳಿಗ್ಗೆ ಈ ವಿಷಯ ಎಲ್ಲೆಡೆ ಹಬ್ಬುತ್ತಿದ್ದಂತೆ ತಾಲ್ಲೂಕು ಆಡಳಿತದ ಅಧಿಕಾರಿಗಳು ಯುವಕರನ್ನು ಪತ್ತೆ ಹಚ್ಚಿ ವೈದ್ಯಕೀಯ ತಪಾಸಣೆ ನಡೆಸಿದರು.

‘ಕೊರೊನಾ ವೈರಸ್‌ನ ಲಕ್ಷಣಗಳು ಕಂಡು ಬಂದಿಲ್ಲ. ಅವರನ್ನು ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಜನರು ಆತಂಕ ಪಡಬೇಕಿಲ್ಲ’ ಎಂದು ತಹಶೀಲ್ದಾರ್ ಗೋವಿಂದ ರಾಜು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.