ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಡಿಯೊ: ಪಾವಗಡದಲ್ಲಿ ಬಿಯರ್‌ ಬಾಟಲಿಯಿಂದ ಹೊಡೆದಾಡಿಕೊಂಡ KPTCL ಅಧಿಕಾರಿಗಳು!

ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Published 29 ಮೇ 2024, 7:18 IST
Last Updated 29 ಮೇ 2024, 7:18 IST
ಅಕ್ಷರ ಗಾತ್ರ

ಪಾವಗಡ: ಕೆಪಿಟಿಸಿಎಲ್‌ನ ಇಬ್ಬರು ಜೂನಿಯರ್‌ ಎಂಜಿನಿಯರ್‌ಗಳು ಹಾಗೂ ಇಬ್ಬರು ಸಿಬ್ಬಂದಿ ಕೈಯಲ್ಲಿ ಬಿಯರ್‌ ಬಾಟಲಿ ಹಿಡಿದು ಹೊಡೆದಾಡಿಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಲೆ ಹೊಡೆದು ರಕ್ತ ಸುರಿಯುತ್ತಿದ್ದರೂ ಅಧಿಕಾರಿಗಳು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಕಳೆದ ಗುರುವಾರ ಪಾವಗಡ ಪಟ್ಟಣದ ಹೊರವಲಯದಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಪಾರ್ಟಿ ಮಧ್ಯೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಜೂನಿಯರ್ ಎಂಜಿನಿಯರ್‌ಗಳಾದ ಶ್ರೀನಿವಾಸ್‌, ವಾದಿರಾಜ್,  ಬೆಸ್ಕಾಂ ಸಿಬ್ಬಂದಿ ನರಸಿಂಹಮೂರ್ತಿ ಮತ್ತು ಸಂತೋಷ್ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT