ತುಮಕೂರು: ಕೆಎಸ್ಆರ್‌ಟಿಸಿ ಬಸ್ ಮತ್ತು ಕಾರ್ ಮಧ್ಯೆ ನಡೆದ ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಚಿಕ್ಕನಾಯಕನಹಳ್ಳಿಯ ಗಿರೀಶ್ (32) ಹಾಗೂ ಮಾನ್ಯ (17) ಎಂದು ಗುರುತಿಸಲಾಗಿದೆ. ರಾಕೇಶ್ (21) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಮಕೂರು ಕಡೆಯಿಂದ ತೆರಳಿದ್ದ ಬಸ್, ತಿಪಟೂರು ಕಡೆಯಿಂದ ಬರುತ್ತಿದ್ದ ಕಾರ್ ಮುಖಾಮುಖಿ ಡಿಕ್ಕಿಯಾಗಿ, ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಮಹಾರಾಷ್ಟ್ರ ಸರ್ಕಾರದಿಂದ ಗಡಿಯಲ್ಲಿ ಮರಾಠಿ ನಾಮಫಲಕ: ಕಸಾಪ ಖಂಡನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.