ಚಿಕ್ಕನಾಯಕನಹಳ್ಳಿ: ಪಟ್ಟಣದ ಪ್ರವಾಸಿ ಮಂದಿರದ ಎದುರು ಶುಕ್ರವಾರ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹೆದ್ದಾರಿ ದಾಟುತ್ತಿದ್ದ ತಾಲ್ಲೂಕಿನ ಹಾಲುಗೊಣದ ನಟರಾಜು (50) ಮೃತಪಟ್ಟಿದ್ದಾರೆ.
ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದ ನಟರಾಜ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಬೆಂಗಳೂರಿನಿಂದ ಉಕ್ಕಡಗಾತ್ರಿ ಕಡೆಗೆ ತೆರಳುತ್ತಿದ್ದ ಬಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.