ತುಮಕೂರು: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣಗೊಂಡ ದೇವರಾಜ ಅರಸು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಉದ್ಘಾಟನೆಯಾಗಿ ಆರು ತಿಂಗಳು ಕಳೆದ ನಂತರ ಜನರ ಬಳಕೆಗೆ ಮುಕ್ತವಾಗಿದೆ.

ಬಸ್ ನಿಲ್ದಾಣದಲ್ಲಿ ಜುಲೈ 27ರಿಂದ ವಾಹನಗಳ ಸಂಚಾರ ಆರಂಭವಾಗಲಿದೆ. ಸುಮಾರು ₹111 ಕೋಟಿ ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಕಾಮಗಾರಿ ಆರಂಭವಾಗಿ 5 ವರ್ಷಗಳು ಕಳೆದ ನಂತರ ಕೊನೆಗೂ ವಾಹನಗಳ ಸಂಚಾರಕ್ಕೆ ಅವಕಾಶ ಸಿಕ್ಕಿದೆ. 2022ರ ವೇಳೆಗೆ ಕಾಮಗಾರಿ ಮುಗಿಸುವ ಗುರಿ ನಿಗದಿ ಪಡಿಸಲಾಗಿತ್ತು. ನಿಗದಿತ ಸಮಯಕ್ಕಿಂತ ಎರಡೂವರೆ ವರ್ಷ ವಿಳಂಬವಾಗಿದೆ ಕೆಲಸ ಪೂರ್ಣಗೊಳಿಸಲಾಗಿದೆ.

ಜ. 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಸ್ ನಿಲ್ದಾಣ ಉದ್ಘಾಟಿಸಿದ್ದರು. ನಿಲ್ದಾಣಕ್ಕೆ ದೇವರಾಜ ಅರಸು ಹೆಸರು ನಾಮಕರಣ ಮಾಡಿದ್ದರು. ಮೇ ತಿಂಗಳ ಅಂತ್ಯಕ್ಕೆ ಬಸ್ ನಿಲ್ದಾಣವನ್ನು ಜನರ ಬಳಕೆಗೆ ನೀಡಬೇಕು ಎಂದು ಗಡುವು ನೀಡಲಾಗಿತ್ತು. ಜುಲೈ ತಿಂಗಳು ಮುಗಿಯುವ ಹೊತ್ತಿಗೆ ಬಸ್ಗಳ ಓಡಾಟ ಶುರುವಾಗಲಿದೆ.

‘ವಾಹನ ಕಾರ್ಯಾಚರಣೆಯನ್ನು ಈಗಿನ ಬಸ್ ನಿಲ್ದಾಣದ (ಹಳೆಯ ತುಮಕೂರು ಘಟಕ-1ರ ಆವರಣ) ಸ್ಥಳದಿಂದ ಸಂಪೂರ್ಣವಾಗಿ ನೂತನ ಬಸ್ ನಿಲ್ದಾಣದ ಆವರಣಕ್ಕೆ ಸ್ಥಳಾಂತರಿಸಲಾಗುವುದು’ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.