ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ಕುಮಾರ್ ಆಚಾರ್ ಸಾವು: ಸೂಕ್ತ ತನಿಖೆಗೆ ಒತ್ತಾಯ

Published 9 ನವೆಂಬರ್ 2023, 14:02 IST
Last Updated 9 ನವೆಂಬರ್ 2023, 14:02 IST
ಅಕ್ಷರ ಗಾತ್ರ

ತುರುವೇಕೆರೆ: ‘ತಾಲ್ಲೂಕಿನ ಕೆ.ಮಾವಿನಹಳ್ಳಿಯ ಕುಮಾರ್ ಆಚಾರ್ ಪೊಲೀಸ್ ವಶದಲ್ಲಿರುವಾಗ ಸಾವನ್ನಪ್ಪಿರುವ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು’ ಎಂದು ಕೆಪಿಸಿಸಿ ಒಬಿಸಿ ಘಟಕದ ರಾಜ್ಯ ಉಪಾಧ್ಯಕ್ಷೆ ಡಾ.ಪವಿತ್ರಾ ಆರ್.ಪ್ರಭಾಕರ್ ರೆಡ್ಡಿ ತಿಳಿಸಿದರು.

ತಾಲ್ಲೂಕಿನ ಕೆ.ಮೇಲನಹಳ್ಳಿಯಲ್ಲಿರುವ ಕುಮಾರ್ ಆಚಾರ್ ಕುಟುಂಬದ ಸದಸ್ಯರನ್ನು ಬುಧವಾರ ಭೇಟಿ ಮಾಡಿದ ನಂತರ ಮಾತನಾಡಿದರು.

ಕುಮಾರ್ ಆಚಾರ್ ಸಾವು ಪೊಲೀಸ್ ದೌರ್ಜನ್ಯದಿಂದಲೇ ಆಗಿದೆ ಎನ್ನುವುದು ಮೇಲ್ನೋಟಕ್ಕೆ ತಿಳಿದಿದೆ. ಮೃತರ ಕುಟುಂಬ ಸಂಕಷ್ಟದಲ್ಲಿದೆ ಎಂದರು.

ಶೀಘ್ರ ಸಿಒಡಿ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.

ರಾಜ್ಯ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ಘಟಕದ ಪ್ರಧಾನ ಕಾರ್ಯದರ್ಶಿ ಮಾ.ನ.ಗುರುದತ್, ರಾಜ್ಯ ಒಬಿಸಿಯ ಉಪಾಧ್ಯಕ್ಷ ಚಿಕ್ಕನಾಯನಹಳ್ಳಿಯ ಡಾ.ವಿಜಯರಾಘವೇಂದ್ರ, ತಾಲ್ಲೂಕು ಕಾಂಗ್ರೆಸ್‌ನ ಒಬಿಸಿ ಘಟಕದ ಅಧ್ಯಕ್ಷ ಸ್ಟುಡಿಯೊ ಮಹೇಂದ್ರ, ಪುಟ್ಟರಾಜ್ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT