ಮೂವರ ವಿರುದ್ಧ ಪ್ರಕರಣ ದಾಖಲು
ಅಪ್ರಾಪ್ತೆ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಪತಿ ಹಾಗೂ ಪೋಷಕರ ವಿರುದ್ಧ ಬಾಲ ವಿವಾಹ ತಡೆ ಕಾಯ್ದೆ ಮತ್ತು ಪೋಕ್ಸೋ ಕಾಯ್ದೆ ಅಡಿ ಗುರುವಾರ ರಾತ್ರಿ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಡೆಯೂರು ವೃತ್ತದ ಮೇಲ್ವಿಚಾರಕಿ ಭಾಗ್ಯಲಕ್ಷ್ಮಿ ದೇವಿ ದೂರು ನೀಡಿದ್ದರು.