ಕುಣಿಗಲ್: ತಾಲ್ಲೂಕಿನ ಬೆಟ್ಟದ ರಂಗಸ್ವಾಮಿ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಜಾತ್ರಾ ಮಹೋತ್ಸವವನ್ನು ಮೇ 29 ಮತ್ತು 30ರಂದು ನಡೆಸಲಾಗುತ್ತಿದೆ ಎಂದು ದೇವಾಲಯ ಜೀರ್ಣೋದ್ಧಾರ ಸಮಿತಿ ರಾಮಕೃಷ್ಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಕ್ಷಾಂತರ ಭಕ್ತರನ್ನು ಹೊಂದಿರುವ ಬೆಟ್ಟದ ಮೇಲಿರುವ ನೂತನ ದೇವಾಲಯ ₹40 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಇನ್ನೂ ಮೂರು ತಿಂಗಳಲ್ಲಿ ಭಕ್ತರಿಗೆ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಬೆಟ್ಟ ಹತ್ತುವ ಮಾರ್ಗದಲ್ಲಿ ವಿಶ್ರಾಂತಿ ಗೃಹ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಾತ್ರೆ ಅಂಗವಾಗಿ 29ರಂದು ಸಂಜೆ ಸುತ್ತಲಿನ 40 ಗ್ರಾಮ ದೇವತೆಗಳನ್ನು ಉತ್ಸವದ ಮೂಲಕ ಬೆಟ್ಟಕ್ಕೆ ಕರೆತಂದು ವಿಶೇಷ ಪೂಜೆ, 30ರಂದು ಬೆಳಗ್ಗೆ ರಂಗನಾಥ್ ಸ್ವಾಮಿಗೆ ವಿಶೇಷ ಅಲಂಕಾರ, ಪೂಜೆ, ವೈಷ್ಣವಿ ಜಾಗ, ನವಚಂಡಿ ಹೋಮ, ಆಶ್ಲೇಷ ಬಲಿ ಹಮ್ಮಿಕೊಳ್ಳಲಾಗಿದೆ. ಕರವೇ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಮಾರುತಿ, ಮುಖಂಡ ವಸಂತ ಕುಮಾರ್, ಬಾಬು ಮತ್ತು ಅರ್ಚಕ ವೃಂದ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-17-1180124559

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.