ಕುಣಿಗಲ್: ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ವಡ್ಡರಕುಪ್ಪೆ ಗ್ರಾಮಸ್ಥರು ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಸಿಬ್ಬಂದಿಯನ್ನು ಕೂಡಿ ಹಾಕಿ, ಖಾಲಿ ಕೂಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯ ವಡ್ಡರ ಕುಪ್ಪೆಯಲ್ಲಿ 110 ಮನೆಗಳಿದ್ದು, ಒಂದು ಟ್ಯಾಂಕ್ ಮತ್ತು ಒಂದು ಮಿನಿ ಟ್ಯಾಂಕ್ ವ್ಯವಸ್ಥೆ ಇದೆ. ಎರಡು ಕೊಳವೆಬಾವಿಗಳಲ್ಲಿ ನೀರು ಬತ್ತಿದ್ದು, ನೀರಿನ ಸಮಸ್ಯೆ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿಯಿಂದ ದಿನಕ್ಕೆ ಒಂದೆರೆಡು ಟ್ಯಾಂಕ್ಗಳ ಮೂಲಕ ಗ್ರಾಮಕ್ಕೆ ನೀರು ಕೊಡುತ್ತಿದ್ದರೂ ಸಾಕಾಗುತ್ತಿಲ್ಲ. ಹೆಚ್ಚಿನ ನೀರಿನ ಅವಶ್ಯಕತೆ ಇರುವುದರಿಂದ ಹೊಸದಾಗಿ ಕೊಳವೆಬಾವಿ ಕೊರೆಸಿ ಮಳೆಗಾಲ ಆರಂಭವಾಗುವವರೆಗೂ ನೀರು ಕೊಡಿ ಎಂದು ಒತ್ತಾಯಿಸಿದರು.

ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಿದ್ದರಿಂದ ಪ್ರತಿಭಟನೆ ಕೈಬಿಡಲಾಯಿತು.

ಪ್ರತಿಭಟನೆಯಲ್ಲಿ ವರಲಕ್ಷ್ಮಮ್ಮ, ಲಕ್ಷ್ಮಮ್ಮ, ರೇಣುಕಮ್ಮ, ಸಂಗೀತ, ಮೊಬೀನ, ವೆಂಕಟೇಶ ರಾಜ್, ವಸಂತ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-17-903876531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.