ಕುಣಿಗಲ್: ತಾಲ್ಲೂಕಿನಲ್ಲಿ ಪರಿಶಿಷ್ಟರ ಸಮಸ್ಯೆಗಳು ಹೆಚ್ಚಾಗಿದ್ದು ತಾಲ್ಲೂಕು ಆಡಳಿತ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕೆಆರ್ಎಸ್ ಪಕ್ಷದ ಪದಾಧಿಕಾರಿಗಳು ಸೋಮವಾರ ಮತ್ತು ಮಂಗಳವಾರ ತಾಲ್ಲೂಕು ಆಡಳಿತ ಸೌಧದ ಮುಂದೆ ಪ್ರತಿಭಟನೆ ನಡೆಸಿದರು.

ಕೆಆರ್ಎಸ್ ಪಕ್ಷದ ಎಸ್ಸಿ, ಎಸ್ಟಿ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ತಾಲ್ಲೂಕಿನಲ್ಲಿ ದಲಿತರ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ತಹಶೀಲ್ದಾರ್ ಸಕಾಲಕ್ಕೆ ಕುಂದುಕೊರತೆ ಸಭೆಗಳನ್ನು ನಡೆಸಲು ವಿಫಲರಾಗಿದ್ದಾರೆ. ತಾಲ್ಲೂಕಿನಲ್ಲಿ ಮೂವರು ತಹಶೀಲ್ದಾರ್ಗಳು ಅಧಿಕಾರ ನಡೆಸಿ ಹೋಗಿದ್ದಾರೆ. ಪ್ರತಿಯೊಬ್ಬರೂ ಸಮಸ್ಯೆಗಳ ಬಗ್ಗೆ ಅರ್ಜಿ ಸ್ವೀಕರಿಸಿದ್ದಾರೆಯೇ ಹೊರತು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿಲ್ಲ ಎಂದು ದೂರಿದರು.

ಗ್ರಾಮ ಆಡಳಿತಾಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದ ಕಾರಣ ಸಮಸ್ಯೆಗಳು ನಿರಂತರವಾಗಿದೆ. ದಲಿತರ ಸಮಸ್ಯೆಗಳಿಗೆ ಸಂಬಂಧಿಸಿದ ಕಡತಗಳು ಇಲಾಖೆಯಿಂದಲೇ ಕಾಣೆಯಾಗಿವೆ. ಕಡತಗಳ ಕಣ್ಮರೆಗೆ ಕಾರಣವಾದ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರೂ, ಕ್ರಮ ತೆಗೆದುಕೊಂಡಿಲ್ಲ. ಸಮಸ್ಯೆಗಳ ಕುರಿತು ದೂರು ನೀಡಿ ವರ್ಷವಾದರೂ ಪರಿಹಾರ ಸಿಕ್ಕಿಲ್ಲ. ಕೆಳ ಹಂತದ ಸಿಬ್ಬಂದಿಯ ಧೋರಣೆಯಿಂದಾಗಿ ದಲಿತರಿಗೆ ಅನ್ಯಾಯವಾಗುತ್ತಿದ್ದು, ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು.

ದಲಿತ ಮುಖಂಡ ಹಟ್ಟಿರಂಗಯ್ಯ ಮಾತನಾಡಿ, ಕೊತ್ತಗೆರೆ ಹೋಬಳಿ ವಾಣಿಗೆರೆಯಲ್ಲಿ ಅಂಬೇಡ್ಕರ್ ಭವನಕ್ಕೆ ಜಮೀನು ಮಂಜೂರಾಗಿರುವ ದಾಖಲೆಗಳು ಇಲಾಖೆಯಿಂದಲೇ ಕಾಣೆಯಾಗಿದೆ. ಪರಿಶಿಷ್ಟ ಜಾತಿ, ಪಂಗಡಗಳಿಗೆ ಸ್ಮಶಾನಕ್ಕೆಂದು ಮೀಸಲಾದ ಜಾಗ ಮಂಜೂರಾತಿಗೆ ಸಿದ್ಧವಾಗಿದ್ದ ಕಡತ ಕಚೇರಿಯ ಹಂತದಲ್ಲೇ ಉಳಿದಿದೆ. ಕೊತ್ತಗೆರೆ ಹೋಬಳಿ ರಾಯಗೋನಹಳ್ಳಿ ಅಂಬೇಡ್ಕರ್ ಭವನ, ವಾಣಿಗೆರೆ, ರಾಯಗೋನಹಳ್ಳಿ ಛಲವಾದಿ ಸಮುದಾಯ ಭವನ ನಿರ್ಮಾಣಕ್ಕಾಗಿ ಜಮೀನು ಮಂಜೂರಾತಿ ಪ್ರಕ್ರಿಯೆಗಳು ಸ್ಥಗಿತಗೊಂಡಿವೆ ಎಂದು ದೂರಿದರು.

ತಹಶೀಲ್ದಾರ್ ಕರಿಯಾ ನಾಯಕ್ ಪ್ರತಿಕ್ರಿಯಿಸಿ, ವರ್ಗಾವಣೆಯಾಗಿ ಬಂದು ಮೂರು ತಿಂಗಳಾಗಿದೆ. ಸಮಸ್ಯೆಗಳ ಬಗ್ಗೆ ಅರಿವಿದೆ, ಸಂಬಂಧಪಟ್ಟ ಕೆಳ ಹಂತದ ಸಿಬ್ಬಂದಿಯೊಂದಿಗೆ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕೆ ಗಮನಹರಿಸುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ಕೆಆರ್ಎಸ್ ಪಕ್ಷದ ಪದಾಧಿಕಾರಿಗಳಾದ ರಮೇಶ್ ಗೌಡ, ವಿಜಯ್ ಕುಮಾರ್, ಕಾಂತರಾಜು, ಪ್ರಸನ್ನ ಕುಮಾರ್, ವೆಂಕಟಗಿರಿಯಪ್ಪ, ನಾಗರಾಜು, ಗೋವಿಂದಪ್ಪ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-17-1281291462

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.