ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಣಿಗಲ್: ಪ್ರಯೋಜನಕ್ಕೆ ಬಾರದ ವಿದ್ಯುತ್ ಚಿತಾಗಾರ

ಕುಂಬಾರಗುಂಡಿ ಪ್ರದೇಶದಲ್ಲಿ ₹2.50 ಕೋಟಿ ವೆಚ್ಚದಲ್ಲಿ ನಿರ್ಮಾಣ: ಉದ್ಘಾಟನೆ ನಂತರ ನಿರಾಸಕ್ತಿ
Published 21 ಫೆಬ್ರುವರಿ 2024, 14:25 IST
Last Updated 21 ಫೆಬ್ರುವರಿ 2024, 14:25 IST
ಅಕ್ಷರ ಗಾತ್ರ

ಕುಣಿಗಲ್: ಪಟ್ಟಣದಲ್ಲಿ ವಿದ್ಯುತ್ ಚಿತಾಗಾರ ಉದ್ಘಾಟನೆಯಾಗಿ ನಾಲ್ಕು ತಿಂಗಳಾದರೂ ವ್ಯವಸ್ಥಿತವಾಗಿ ಕಾರ್ಯಾರಂಭ ಮಾಡದ ಕಾರಣ ಇದ್ದು, ಇಲ್ಲದಂತಾಗಿದೆ.

ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಅವರ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಕುಂಬಾರಗುಂಡಿ ಪ್ರದೇಶದಲ್ಲಿ ₹2.50 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣವಾಗಿದ್ದು, ಕಳೆದ ನವೆಂಬರ್‌ನಲ್ಲಿ ಉದ್ಘಾಟನೆಯಾಗಿದೆ.

ಉದ್ಘಾಟನೆಯ ಸಮಯದಲ್ಲಿ ಅಣಕು ಪ್ರದರ್ಶನದ ಮೂಲಕ ಗಮನಸೆಳೆಯಲಾಗಿತ್ತು. ನಂತರದ ದಿನಗಳಲ್ಲಿ ಕಾರ್ಯಾರಂಭ ಮಾಡಿಲ್ಲ.

ಪುರಸಭೆ ಎಂಜನಿಯರ್ ಬಿಂದುಸಾರ ಹೇಳಿಕೆಯಂತೆ ಎರಡು ಹಂತದಲ್ಲಿ ಕಾಮಗಾರಿ ಮಾಡಲಾಗಿದ್ದು, ಮೊದಲ ಹಂತದಲ್ಲಿ ಕಟ್ಟಡ ನಿರ್ಮಾಣ ಮಾಡಿ ಪುರಸಭೆ ವಶಕ್ಕೆ ನೀಡಲಾಗಿದೆ.

ಎರಡನೇ ಹಂತದ ಕಾಮಗಾರಿಯಲ್ಲಿ ವಿದ್ಯುತ್ ಸಂಪರ್ಕ ಸೇರಿದಂತೆ ಶವ ಸುಡುವ ಕುಲುಮೆ ಯಂತ್ರ ಅಳವಡಿಸಲಾಗಿದೆ. ಉದ್ಘಾಟನೆಯ ಸಮಯದಲ್ಲಿ ತಾತ್ಕಾಲಿಕವಾಗಿ ಅಣುಕು ಪ್ರದರ್ಶನ ನಡೆಸಲಾಯಿತು. ಸಂಪೂರ್ಣವಾಗಿ ವಿದ್ಯುತ್ ಸಲಕರಣೆ ಅಳವಡಿಸಿ ವ್ಯವಸ್ಥಿತ ನಿರ್ವಹಣೆಗೆ ಅಗತ್ಯ ಸಿಬ್ಬಂದಿ ನೇಮಕ ಮಾಡದ ಕಾರಣ ವ್ಯವಸ್ಥಿತವಾಗಿ ಕಾರ್ಯಾರಂಭ ಮಾಡಿಲ್ಲ. ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ವ್ಯವಸ್ಥಿತ ನಿರ್ವಹಣೆಗೆ ಕ್ರಮತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ಬಲರಾಂ ಪ್ರತಿಕ್ರಿಯಿಸಿ, ಶಾಸಕರು ಮತ್ತು ಸಂಸದರು ಚುನಾವಣೆ ಪೂರ್ವದಲ್ಲಿ ಅಭಿವೃದ್ಧಿ ಕಾರ್ಯಗಳ ಪೂಜೆ ಮಾಡುತ್ತಾರೆ, ನಂತರ ಸುಮ್ಮನಾಗುತ್ತಾರೆ ಎಂಬುದಕ್ಕೆ ವಿದ್ಯುತ್ ಚಿತಾಗಾರವೇ ಸಾಕ್ಷಿಯಾಗಿದೆ. ವ್ಯವಸ್ಥಿತ ನಿರ್ವಹಣೆಗೆ ಕ್ರಮ ತೆಗೆದುಕೊಳ್ಳುವುದರ ಜತೆಗೆ ಅಗ್ನಿಸ್ಪರ್ಶದ ಮೂಲಕ ಅಂತ್ಯಕ್ರಿಯೆ ನಡೆಸುವ ಸಮುದಾಯದ ಮುಖಂಡರ ಸಭೆ ನಡೆಸಿ ಜಾಗೃತಿ ಮೂಡಿಸಬೇಕಿದೆ  ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT