ಜಿಲ್ಲಾಧಿಕಾರಿ ಗಮನಕ್ಕೆ ತಂದು ಕ್ರಮ
ತಹಶೀಲ್ದಾರ್ ರಶ್ಮಿ ಪ್ರತಿಕ್ರಿಯಿಸಿ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಅರಣ್ಯ ಪ್ರದೇಶ ಉಳಿಸುವುದು ಎಲ್ಲರ ಕರ್ತವ್ಯ. ಅಧಿಕಾರಿಗಳ ಮೇಲೆ ಹೆಚ್ಚಿನ ಒತ್ತಡವಿದೆ. ಈಗಾಗಲೇ ಬಗರ್ ಹುಕುಂ ಸಾಗುವಳಿಯಲ್ಲಿ ಮಂಜೂರಾತಿ ಪಡೆದವರಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಅರಣ್ಯ ಪ್ರದೇಶವನ್ನು ಗುರುತಿಸುವ ಸಲುವಾಗಿ ಜಂಟಿ ಸರ್ವೆ ಮಾಡಿ ನಂತರ ಕ್ರಮ ತೆಗೆದುಕೊಳ್ಳಲಾಗುವುದು. ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಮಂಜೂರಾತಿ ನೀಡುವ ಬಗ್ಗೆ ಸಮಿತಿ ಗಮನಹರಿಸಲಿದೆ. ರೈತರನ್ನು ಒಕ್ಕಲೆಬ್ಬಿಸದೆ ಅಗತ್ಯ ಸಮಯದಲ್ಲಿ ಜಂಟಿ ಸರ್ವೆ ವರದಿಯನ್ನು ಜಿಲ್ಲಾಧಿಕಾರಿ ಗಮನಕ್ಕೆ ತಂದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.