ಕುಣಿಗಲ್: ತಾಲ್ಲೂಕಿನ ಕಗ್ಗರೆ ಬಳಿ ಶನಿವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಗುಳ್ಳೆನರಿಗೆ ಇಲ್ಲಿಯ ಪಶುಪಾಲನಾ ಇಲಾಖೆ ಡಾ.ನವೀನ್ ಸತತ ಐದು ತಾಸು ಶಸ್ತ್ರಚಿಕಿತ್ಸೆ ನಡೆಸಿ, ಪ್ರಾಣ ಉಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಗುಳ್ಳೆನರಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪ್ರಾಣಿಪ್ರಿಯ ವೇಣು ಪಟ್ಟಣದ ಪಶುಪಾಲನಾ ಕೇಂದ್ರಕ್ಕೆ ದಾಖಲಿಸಿದ್ದರು.

ಕಾಲು ಮತ್ತು ಬೆನ್ನು ಭಾಗದ ಮೂಳೆಗಳು ಮುರಿದಿದ್ದವು. ಸಾವು, ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ಗುಳ್ಳೆನರಿಗೆ ಡಾ. ನವೀನ್ ಭಾನುವಾರ ಶಸ್ತ್ರಚಿಕಿತ್ಸೆ ಮಾಡಿದ್ದರು.

ವೈದ್ಯರ ಸಲಹೆ ಮೇರೆಗೆ ರಂಗಸ್ವಾಮಿ ಗುಡ್ಡದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಳ್ಳೆನರಿಯ ಆರೈಕೆ ಮಾಡುತ್ತಿದ್ದು, ಚೇತರಿಸಿಕೊಂಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-17-414328193

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.