ಕುಣಿಗಲ್: ಒಳ ಮೀಸಲಾತಿ ಜಾರಿಗೆ ವಿಫಲವಾಗಿರುವ ಸರ್ಕಾರದ ಧೋರಣೆ ಖಂಡಿಸಿ ತಾಲ್ಲೂಕಿನ ಮಾದರ ಮಹಾಸಭಾ ಮತ್ತು ಮಾದಿಗ ಸಂಘಟನೆಗಳ ಒಕ್ಕೂಟ ಇದೇ ತಿಂಗಳು ತಾಲ್ಲೂಕು ಆಡಳಿತಗಳು ನಡೆಸುವ ಬಾಬು ಜಗಜೀವನರಾಮ್ ಮತ್ತು ಬಿ.ಆರ್. ಅಂಬೇಡ್ಕರ್ ಜಯಂತಿ ಬಹಿಷ್ಕರಿಸುವುದಾಗಿ ಜಿಲ್ಲಾ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ ತಿಳಿಸಿದರು.

ಮಾದಿಗ ಸಂಘಟನಗಳ ಒಕ್ಕೂಟದ ಪದಾಧಿಕಾರಿಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 35 ವರ್ಷಗಳಿಂದ ಒಳ ಮೀಸಲಾತಿಗೆ ಆಗ್ರಹಿಸಿ ಮಾದಿಗ ಪರ ಸಂಘಟನೆಗಳು ಹೋರಾಟ ನಡೆಸುತ್ತಿದ್ದರೂ, ಕಳೆದ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಒಳ ಮೀಸಲಾತಿ ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದರೂ, ಜಾರಿ ಮಾಡಿಲ್ಲ ಎಂದರು. ಸಭೆಯಲ್ಲಿ ತಾಲ್ಲೂಕು ಮಾದಿಗ ಮಹಾಸಭಾ ಅಧ್ಯಕ್ಷ ಶ್ರೀನಿವಾಸ್, ರಾಜಣ್ಣ, ವಿ.ಶಿವಶಂಕರ್, ನರಸಿಂಹಮೂರ್ತಿ ರಾಮಚಂದ್ರಯ್ಯ, ರಂಗನಾಥ್, ಸಿದ್ದೇಶ್, ಕಾರ್ತಿಕ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-17-1281336881

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.