ಕುಣಿಗಲ್: 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಕೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ವಿನಯ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ಮತ್ತು ಯುವಕ ಅಕ್ಕಪಕ್ಕದ ಮನೆಯ ನಿವಾಸಿಗಳು. ‘ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ವಿನಯ್ ವಿರುದ್ಧ ಕ್ರಮ ಕೈಗೊಳ್ಳುವಂತೆ’ ಕೋರಿ ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ ಕುಣಿಗಲ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

‘ಮಗಳ ಆರೋಗ್ಯ ಸರಿ ಇಲ್ಲದಿದ್ದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ. ಆಗ 8 ತಿಂಗಳ ಗರ್ಭಿಣಿ ಎಂಬುವುದು ಗೊತ್ತಾಯಿತು. ಆಕೆಯನ್ನು ವಿಚಾರಿಸಿದಾಗ ಎಲ್ಲ ವಿಷಯ ಹೇಳಿದಳು. ಕೂಡಲೇ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ’ ಎಂದು ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.