ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಣಿಗಲ್ | ಹಳೆ ದ್ವೇಷ: ರೌಡಿಶೀಟರ್ ಸುರೇಶ್ ಅಲಿಯಾಸ್ ಕ್ಯಾಪ್ಟನ್ ಸೂರಿ ಕೊಲೆ

Published 31 ಡಿಸೆಂಬರ್ 2023, 5:01 IST
Last Updated 31 ಡಿಸೆಂಬರ್ 2023, 5:01 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ಕಂಪಲಪುರದ ಬಳಿ ಶನಿವಾರ ರಾತ್ರಿ ರೌಡಿ ಶೀಟರ್ ಸುರೇಶ್ ಅಲಿಯಾಸ್ ಕ್ಯಾಪ್ಟನ್ ಸೂರಿ (45) ಎಂಬುವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ಮತ್ತೊಬ್ಬ ರೌಡಿ ಶೀಟರ್ ಮತ್ತು ಬೆಂಬಲಿಗರು ಸುರೇಶ್‌ನನ್ನು ಹತ್ಯೆ ಮಾಡಿದ್ದಾರೆ ಎಂಬುವುದು ಗೊತ್ತಾಗಿದೆ.

ಸುರೇಶ್ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕೊಲೆ ಮತ್ತು ಅಪಹರಣ ಪ್ರಕರಣಗಳಲ್ಲಿ ಆರೋಪಿಯಾಗಿ ಜೈಲು ಶಿಕ್ಷೆ ಅನುಭವಿಸಿ ಇತ್ತೀಚೆಗೆ ಬಿಡುಗಡೆಯಾಗಿದ್ದ. ಶನಿವಾರ ರಾತ್ರಿ ಸ್ನೇಹಿತರಾದ ದೇವಿ ಮತ್ತು ಪ್ರಕಾಶ್ ಜತೆ ಕಾರಿನಲ್ಲಿ ಬರುತ್ತಿದ್ದಾಗ ಮತ್ತೊಂದು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕಾರಿಗೆ ಡಿಕ್ಕಿ ಹೊಡೆದು ನಂತರ ಲಾಂಗ್, ಮಚ್ಚುಗಳಿಂದ ಸುರೇಶ್‌ನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸುರೇಶ್ ತಂದೆ ಹುಲಿಯೂರುದುರ್ಗ ಠಾಣೆಗೆ ದೂರು ನೀಡಿದ್ದು, ರೌಡಿ ಶೀಟರ್ ಆಟೊ ರಾಮ ಮತ್ತು ಆತನ ಸಂಬಂಧಿ ನಾಗೇಶ್ ಸೇರಿದಂತೆ ಇತರರ ಗುಂಪು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆಟೊ ರಾಮ ಸಹ ಬೆಂಗಳೂರಿನ ಹನುಮಂತ ನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್, ಜೈಲು ಶಿಕ್ಷೆ ಅನುಭವಿಸಿದ್ದ ಎಂದು ತಿಳಿದು ಬಂದಿದೆ. ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT