ಕುಣಿಗಲ್: ತಾಲ್ಲೂಕಿನಲ್ಲಿ ಮಳೆ ಮರೀಚಿಕೆಯಾಗಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ಗ್ರಾಮೀಣ ಪ್ರದೇಶದಲ್ಲಿ ಜನ, ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗುತ್ತದೆ.

ತಾಲ್ಲೂಕಿನಲ್ಲಿ 36 ಗ್ರಾಮ ಪಂಚಾಯಿತಿಯ 24 ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪ್ರಾರಂಭವಾಗಿದೆ. ಕೊತ್ತಗೆರೆ ಹೋಬಳಿಯ ತರೆದಕುಪ್ಪೆ, ಬಾಗೇನಹಳ್ಳಿ ಪಂಚಾಯಿತಿಯ 12 ಗ್ರಾಮಗಳಲ್ಲಿ ಮತ್ತು ಹುಲಿಯೂರುದುರ್ಗ ಹೋಬಳಿ ನಿಡಸಾಲೆ ಪಂಚಾಯಿತಿಯ ಮೂರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ.

ಮೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕಾರಿಗಳು ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುತ್ತಿದ್ದಾರೆ. ಜತೆಗೆ ಖಾಸಗಿ ಕೊಳವೆಬಾವಿ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ನೀರನ್ನು ಪಡೆದು ಸರಬರಾಜು ಮಾಡುತ್ತಿದ್ದರೂ, ನಿರೀಕ್ಷಿತ ಪ್ರಮಾಣದ ಮಳೆಯಾಗದ ಕಾರಣ ಸಮಸ್ಯೆ ಮತ್ತಷ್ಟೂ ಬಿಗಡಾಯಿಸುತ್ತಿದೆ.

ಹುಲಿಯೂರುದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಶಿಂಷಾ ಕೊಳ್ಳದಿಂದ ನೀರು ಪಡೆದು ವಿತರಣೆ ಮಾಡಲಾಗುತ್ತಿದೆ. ಕೊಳ್ಳ ಬತ್ತಿಹೋಗುತ್ತಿದ್ದು, ನೀರಿನ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ಈ ಭಾಗದಲ್ಲೂ ನೀರಿನ ಸಮಸ್ಯೆ ವಾರದಲ್ಲೇ ಮತ್ತೆ ಹೆಚ್ಚಾಗುತ್ತದೆ. ಎಡೆಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಮಾರ್ಕೋನಹಳ್ಳಿ ಜಲಾಶಯದಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ನೀರು ಸರಬರಾಜಾಗುತ್ತಿದೆ. ಕಾರ್ಯನಿರ್ವಹಿಸುತ್ತಿದ್ದ 4 ಪಂಪ್ಮೋಟಾರ್ಗಳ ಪೈಕಿ ಮೂರು ಕೆಟ್ಟು ವರ್ಷಗಳೇ ಕಳೆದಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ದೂರಿರುವ ನಾಗರಿಕರು ಪರಿಸ್ಥಿತಿ ಮುಂದುವರಿದರೆ ಎಡೆಯೂರು, ಬೀರಾಗಾನಹಳ್ಳಿ, ಜಲಧಿಗೆರೆ ಗ್ರಾಮಗಳಲ್ಲಿ ಸಮಸ್ಯೆ ಹೆಚ್ಚಾಗುತ್ತದೆ ಎಂದು ತಿಳಿಸಿದ್ದಾರೆ.

ತಾಲ್ಲೂಕಿನ 70 ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. 30 ಗ್ರಾಮದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. 11 ಗ್ರಾಮದಲ್ಲಿ ಖಾಸಗಿ ಕೊಳವೆಬಾವಿ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ನೀರು ವಿತರಣೆ ಮಾಡಲಾಗುತ್ತದೆ ಎಂದು ತಾಲ್ಲೂಕು ಪಂಚಾಯಿತಿ ಇಒ ವಸಂತ್ ಕುಮಾರ್ ತಿಳಿಸಿದ್ದಾರೆ.

ತಾಲ್ಲೂಕಿನ 36 ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ 800 ಕೊಳವೆ ಬಾವಿಗಳಿದ್ದು, 80 ಕೊಳವೆಬಾವಿ ಬತ್ತಿ ಹೋಗಿದೆ. ಅಂತರ್ಜಲ ಕುಸಿದ ಪರಿಣಾಮ ಒಂದು ಸಾವಿರ ಅಡಿ ಕೊರೆದರೂ ನೀರು ಸಿಗುವುದು ಕಷ್ಟವಾಗಿದೆ. ಹೊಸದಾಗಿ 44 ಕೊಳವೆಬಾವಿ ಕೊರೆಸಲಾಗುತ್ತಿದೆ.

ಗ್ರಾಮ ಪಂಚಾಯಿತಿ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಲ್ಲಿ ಜನಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಇಲ್ಲದ ಕಾರಣ ಗ್ರಾಮೀಣ ಪ್ರದೇಶದ ಜನರು ಕುಡಿಯುವ ನೀರಿನ ಸಮಸ್ಯೆಗೆ ನೇರವಾಗಿ ಶಾಸಕ ಡಾ.ರಂಗನಾಥ್ ಅವರನ್ನೆ ಸಂಪರ್ಕಿಸುತ್ತಿದ್ದಾರೆ. ಸಮಸ್ಯೆಗೆ ಸ್ಪಂದಿಸಲು ಶಾಸಕರು ಒಟ್ಟು ಐದು ಕಾರ್ಯಪಡೆ ಸಭೆಗಳನ್ನು ನಡೆಸಿ, ಕುಡಿಯುವ ನೀರಿನ ಸಮಸ್ಯೆಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಕೊಳವೆಬಾವಿ ಕೊರೆಸುವುದು ಮತ್ತೂ ಟ್ಯಾಂಕರ್ ಮೂಲಕ ಸರಬರಾಜು ಮಾಡುವುದೇ ಪರಿಹಾರವಲ್ಲ. ಮಿತವಾಗಿ ಬಳಸುವುದರ ಜತೆಗೆ, ತಾಲ್ಲೂಕಿನಲ್ಲಿ ಕೊಳವೆ ಬಾವಿ ಕೊರೆಸುವುದಕ್ಕೆ ತಾಲ್ಲೂಕು ಆಡಳಿತದ ಅನುಮತಿ ಕಡ್ಡಾಯ ಮಾಡಿ, ಹೊಸದಾಗಿ ಕೊರೆಯುವ ಖಾಸಗಿ ಕೊಳವೆಬಾವಿ ಮಾಲೀಕರು ಕುಡಿಯುವ ನೀರಿಗಾಗಿ ಸಹಕರಿಸಲು ಮನವಿ ಮಾಡಿದ್ದಾರೆ.

ತಾಲ್ಲೂಕಿನಲ್ಲಿ ಒಟ್ಟು 135 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. 120 ಕಾರ್ಯನಿರ್ವಹಿಸುತ್ತಿದ್ದು 15 ದುರಸ್ತಿಯಾಗಬೇಕಿದೆ. ಹೊಸದಾಗಿ 20 ಘಟಕಗಳ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗಿದೆ.

ಕೃಷಿ ಇಲಾಖೆ ಅಧಿಕಾರಿಗಳ ಮಾಹಿತಿಯಂತೆ ತಾಲ್ಲೂಕಿಗೆ ವಾರ್ಷಿಕ ಸರಾಸರಿ 830 ಮಿ.ಮೀ ಮಳೆಯಾಗಬೇಕಾಗಿದ್ದು ಇದುವರೆಗೂ 40 ಮಿ.ಮೀ ಮಳೆಯಾಗಿದೆ. ಏಪ್ರಿಲ್ ತಿಂಗಳಲ್ಲಿ 40 ಮಿ.ಮೀ ಮಳೆಯಾಗಬೇಕಾಗಿದ್ದು 10 ಮಿ.ಮೀ ಮಳೆಯಾಗಿದೆ. ಶೇ 90ರಷ್ಟು ಮಳೆ ಕೊರತೆಯಾಗಿರುವುದರಿಂದ ಪೂರ್ವ ಮುಂಗಾರು ಚಟುವಟಿಕೆ ಪ್ರಾರಂಭವಾಗಿಲ್ಲ.

ದೊಡ್ಡಕೆರೆಯಲ್ಲಿ ನೀರು ಇರುವುದರ ಜತೆಗೆ 90 ಕೊಳವೆ ಬಾವಿಗಳಿರುವುದರಿಂದ ಕುಣಿಗಲ್ ಪಟ್ಟಣದಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಆದರೂ ವಿತರಣೆ ವ್ಯವಸ್ಥೆಯ ಲೋಪ ಮತ್ತು ಶುದ್ಧೀಕರಣಗೊಳಿಸುವಲ್ಲಿ ಪುರಸಭೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಸಮಸ್ಯೆ ಹೆಚ್ಚಾಗುತ್ತಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-17-664573983

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.