ಕುಣಿಗಲ್: ಸಂತೆಮಾವತ್ತೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಶಾಸಕರ ಕುಮ್ಮಕ್ಕಿನಿಂದ ಚುನಾವಣಾಧಿಕಾರಿಯಾಗಿದ್ದ ಸುನಿಲ್ ಕುಮಾರ್ ಮತಪತ್ರ ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ಪರ ಕಾರ್ಯನಿರ್ವಹಿಸಿದ್ದಾರೆ. ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹುಚ್ಚಮಾಸ್ತಿಗೌಡ ವೃತ್ತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ತುಮುಲ್ ನಿರ್ದೇಶಕ ಡಿ.ಕೃಷ್ಣಕುಮಾರ್ ಮಾತನಾಡಿ, ಚುನಾವಣೆಯಲ್ಲಿ ಅಧಿಕಾರಿ ಶಾಸಕರ ಕುಮ್ಮಕ್ಕಿನಿಂದ ಮತಪತ್ರಗಳ ದುರುಪಯೋಗ ಮಾಡಿದ್ದಾರೆ. ಅಧಿಕಾರಿ ನೀಡಿದ ದೂರಿನ ಮೇರೆಗೆ ಜೆಡಿಎಸ್, ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದರು.

ಪೊಲೀಸ್ ಮತ್ತು ಸಹಕಾರಿ ಇಲಾಖೆ ಅಧಿಕಾರಿಗಳು ಶಾಸಕರ ಗುಲಾಮರಾಗಿ ಕಾರ್ಯನಿರ್ವಹಿಸಿ ತಪ್ಪು ಮಾಡಿದ ಅಧಿಕಾರಿಗಳಿಂದ ದೂರು ಪಡೆದು ಪ್ರಕರಣ ದಾಖಲಿಸಿದ್ದಾರೆ. ಇದಕ್ಕೆ ಬೆದರುವುದಿಲ್ಲ. ನೀರಾವರಿ ಯೋಜನೆಗಳಿಗೆ ಒತ್ತು ನೀಡಿರುವ ಶಾಸಕರು ಕಮಿಷನ್ ದಂಧೆಯಲ್ಲಿ ನಿರತರಾಗಿದ್ದಾರೆ. ಶ್ರೀರಂಗ ಏತ ನೀರಾವರಿ ಯೋಜನೆ ಮೂಲಕ ಪ್ರಾಯೋಗಿಕವಾಗಿ ಮಾಗಡಿ ತಾಲ್ಲೂಕಿಗೆ ಮಾತ್ರ ನೀರು ಹರಿಸಿ, ತಾಲ್ಲೂಕಿಗೆ ಅನ್ಯಾಯ ಮಾಡಿದ್ದಾರೆ ಎಂದು ದೂರಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ, ಸದಸ್ಯ ಶಿವರಾಮಯ್ಯ, ಕಲ್ಲನಾಯಕನಹಳ್ಳಿ ಶಿವಣ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ್ ನಾಯಕ್, ಮಾಜಿ ಸದಸ್ಯ ಕೆ.ಎಸ್.ಬಲರಾಂ, ಯಡೆಯೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್, ದೀಪೂ, ಪುರಸಭೆ ಮಾಜಿ ಅಧ್ಯಕ್ಷ ಕೆ.ಎಲ್.ಹರೀಶ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೊಡಿಗೆಹಳ್ಳಿ ದಿನೇಶ್, ದಿಲೀಪ್ ಅವರು ಶಾಸಕರ ವರ್ತನೆ, ಅಧಿಕಾರಿಗಳ ನಡೆ ಖಂಡಿಸಿ ಮಾತನಾಡಿದರು

ಡಿ.ಸಿಸಿ ಬ್ಯಾಂಕ್ ನಿರ್ದೇಶಕ ಬಿ.ಶಿವಣ್ಣ, ರಂಗಸ್ವಾಮಿ, ಕೃಷ್ಣ , ಜಗದೀಶ್ ಈ., ಮಂಜು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಬಂಧಿಸದಿದ್ದರೆ ಹೋರಾಟ ತೀವ್ರ

ತಾಲ್ಲೂಕು ಕಚೇರಿ ಮುಂದೆ ನಡೆದ ಸಭೆಯಲ್ಲಿ ಜೆಡಿಎಸ್ ಮುಖಂಡ ಡಾ. ಬಿ.ಎನ್. ರವಿ ಮಾತನಾಡಿ ಮತದಾನ ಕೇಂದ್ರದಲ್ಲಿ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಘಟನೆ ನಡೆದಿದೆ. ಮತಪತ್ರ ದುರುಪಯೋಗದ ಬಗ್ಗೆ ಅಧಿಕೃತ ದಾಖಲೆಗಳನ್ನು ನೀಡಿದ್ದರೂ ಅಧಿಕಾರಿ ಮೇಲೆ ಹಲ್ಲೆ ನಡೆಯದಿದ್ದರೂ ಹಲ್ಲೆ ನಡೆಸಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರ ಮೇಲೆ ಪ್ರಕರಣ ದಾಖಲಿಸಿರುವುದ ಖಂಡನೀಯ. ಅಧಿಕಾರಿ ಸುನಿಲ್ ಕುಮಾರ್ ಬಂಧನ ಮತ್ತು ಅಮಾನತು ಮಾಡದಿದ್ದರೆ ಹೋರಾಟ ಮುಂದುವರೆಯುತ್ತದೆ. ಅಧಿಕಾರಿಯನ್ನು ತಾಲ್ಲೂಕಿನ ಯಾವುದೇ ಚುನಾವಣೆಗೆ ನಿಯೋಜಿಸದಂತೆ ಕ್ರಮ ಕೈಗೊಳ್ಳಬೇಕು ಎಂದರು. ಅಧಿಕಾರಿಗಳು ಶಾಸಕರ ಸೂಚನೆ ಮೇರೆಗೆ ವರ್ತಿಸುತ್ತಿದ್ದಾರೆ.ಶಾಸಕರ ಮಾತಿನಂತೆ ನಡೆದ ಕೆಲ ಅಧಿಕಾರಿಗಳು ಕೆಲಸ ಕಳೆದುಕೊಂಡಿದ್ದಾರೆ. ಅಧಿಕಾರಿಗಳು ಶಾಸಕರ ಮರ್ಜಿಯಲ್ಲಿ ಕೆಲಸ ಮಾಡದೆ ಕಾನೂನು ಪ್ರಕಾರ ಕೆಲಸ ಮಾಡಿ ಜನರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.