ಕುಣಿಗಲ್: ತಾಲ್ಲೂಕಿನ 36 ಗ್ರಾಮ ಪಂಚಾಯಿತಿಗಳ ಪೈಕಿ 26 ಗ್ರಾಮ ಪಂಚಾಯಿತಿಗಳ 65 ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಪಿಡಿಒಗಳು ಸಮಸ್ಯೆಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಡಾ.ರಂಗನಾಥ್ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕೊಳವೆಬಾವಿ ಕೊರೆಯುವುದೇ ಪರಿಹಾರವಲ್ಲ. ಟ್ಯಾಂಕರ್ ಮೂಲಕ ನೀರು ವಿತರಣೆಗೆ ಗಮನಹರಿಸಲು ಮತ್ತು ಖಾಸಗಿ ಕೊಳವೆಬಾವಿ ಮಾಲೀಕರಲ್ಲಿ ಒಪ್ಪಂದ ಮಾಡಿಕೊಂಡು ನೀರು ಪಡೆದು ವಿತರಿಸಲು ಸಲಹೆ ನೀಡಿದರು.

ಸದ್ಯಕ್ಕೆ ಕೊತ್ತಗೆರೆ ಹೋಬಳಿ ತರೆದಕುಪ್ಪೆ ಮತ್ತು ಬಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳಿನಿಂದ ಸಮಸ್ಯೆ ಹೆಚ್ಚಾಗಿದೆ. ನೀರಿನ ವ್ಯವಸ್ಥೆಗೆ ಅಧಿಕಾರಿಗಳು ಶ್ರಮಪಡುತ್ತಿದ್ದು, ಗ್ರಾಮಸ್ಥರು ಸಹಕಾರ ನೀಡಲು ಮನವಿ ಮಾಡಿದರು.

ಇನ್ನೂ ಒಂದು ತಿಂಗಳು ಕಷ್ಟದ ದಿನಗಳಾಗಿದ್ದು, ಗ್ರಾಮ ಪಂಚಾಯಿತಿ ಪಿಡಿಒಗಳು ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಳ್ಳದೆ ನೀರಿನ ಸಮಸ್ಯೆಗಳಿಗೆ ಸ್ಪಂದಿಸವಂತೆ ತಾಕೀತು ಮಾಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಸಂತ್ ಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ 135 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, 21 ಕೆಟ್ಟಿವೆ. 15 ದುರಸ್ತಿ ಮಾಡಲಾಗಿದೆ. ಇನ್ನೂ ಆರು ಘಟಕಗಳು ದುರಸ್ತಿಯಾಗಬೇಕಿದೆ ಎಂದು ಮಾಹಿತಿ ನೀಡಿದರು.

ತಹಶೀಲ್ದಾರ್ ಕರಿಯಾ ನಾಯಕ್, ನರೇಗಾ ಸಹಾಯಕ ನಿರ್ದೇಶಕ ಕಾಂತರಾಜು, ಗ್ರಾಮಪಂಚಾಯಿತಿ ಪಿಡಿಒ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.