ಕುಣಿಗಲ್: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯ ಶಿಕ್ಷಕರ ನಡುವಿನ ರಗಳೆ ಶನಿವಾರ ಪೊಲೀಸ್ ಠಾಣೆ ಮೆಟ್ಟಲೇರಿದೆ.

ಮತದಾರ ಪಟ್ಟಿಯಿಂದ ರಾಮಸ್ವಾಮಿ ಹೆಸರು ಕೈಬಿಟ್ಟ ಹಿನ್ನೆಲೆಯಲ್ಲಿ ಎರಡು ಬಣಗಳ ನಡುವೆ ವಾಗ್ವಾದ ನಡೆದಿದೆ.

ರಾಮಸ್ವಾಮಿ ಹೆಸರು ಕೈಬಿಡಲು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬೋರೆಗೌಡ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ ರಾಮಸ್ವಾಮಿ ದೂರವಾಣಿ ಮೂಲಕ (ಬೋರೆಗೌಡರವರಿಗೆ) ಪ್ರಾಣ ಬೆದರಿಕೆ, ಅವಾಚ್ಯ ಶಬ್ದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಕ್ರಮ ತೆಗೆದುಕೊಳ್ಳಲು ಬೋರೆಗೌಡ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರತಿಯಾಗಿ ರಾಮಸ್ವಾಮಿ ಬಣದ ಶಿಕ್ಷಕ ಹನುಮಂತರಾಯಪ್ಪ, ಬೋರೆಗೌಡ ಜಾತಿ ನಿಂದನೆ ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ಅರ್ಜಿ ನೀಡಿದ್ದಾರೆ.

ಎರಡೂ ಬಣದ ದೂರುಗಳನ್ನು ಸ್ವೀಕರಿಸಿರುವ ಪೊಲೀಸರು, ವಿಚಾರಣೆ ಮಾಡಿ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-17-1870413479

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.