ಕುಣಿಗಲ್: ತಾಲೂಕಿನಲ್ಲಿ 2026– 27ನೇ ಸಾಲಿನ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮಮತಾಮಣಿ ಗುರುವಾರ ಚಾಲನೆ ನೀಡಿದರು.

ತಾಲ್ಲೂಕಿನಲ್ಲಿ 401 ಶಾಲೆಗಳಿದ್ದು, 1,51,900 ಪಠ್ಯ ಪುಸ್ತಕಗಳಿಗೆ ಬೇಡಿಕೆ ಸಲ್ಲಿಸಲಾಗಿತ್ತು. ಈವರೆಗೆ 1,10,720 ಪುಸ್ತಕಗಳು ಪೂರೈಕೆಯಾಗಿವೆ. ಶೇ 80ರಷ್ಟು ಪಠ್ಯಪುಸ್ತಕಗಳು ಪೂರೈಕೆ ಆಗಿದ್ದು ಇವುಗಳನ್ನು ಎಲ್ಲ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ಮೂಲಕ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ .

ತಾಲ್ಲೂಕಿನ ಎಲ್ಲ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ಸಹ ಸರಬರಾಜು ಮಾಡಲಾಗಿದ್ದು, ಉಚಿತ ಪಠ್ಯ ಪುಸ್ತಕದ ಜೊತೆ ಶಾಲಾ ಪ್ರಾರಂಭೋತ್ಸವದಂದು ಮಕ್ಕಳಿಗೆ ಉಚಿತ ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಅಕ್ಷದಾಸೋಹ ಕಾರ್ಯಕ್ರಮ ಮತ್ತು ಪೋಷಕರ ಮಹಾಸಭೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಶಿಕ್ಷಣ ಸಂಯೋಕರಾದ ಗಂಗಾಧರ್, ನಾಗರಾಜು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-17-491198886

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.