ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿಶ್ವಮಾನವ ಸಂದೇಶ ಸಾರಿದ ಕವಿ: ಜಿ.ಕಲ್ಪನಾ

Published 29 ಡಿಸೆಂಬರ್ 2023, 13:26 IST
Last Updated 29 ಡಿಸೆಂಬರ್ 2023, 13:26 IST
ಅಕ್ಷರ ಗಾತ್ರ

ಕೊಡಿಗೇನಹಳ್ಳಿ: ಗ್ರಾಮದ ಬ್ರೈಟ್ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದಿಂದ ವಿಶ್ವಮಾನವ ಕುವೆಂಪು ಜಯಂತಿ ಆಚರಿಸಲಾಯಿತು.

ನಿಸರ್ಗ ಶಾಲೆ ಪ್ರಾಂಶಪಾಲ ಜಿ.ಕಲ್ಪನಾ ಮಾತನಾಡಿ, ಕುವೆಂಪು ಕನ್ನಡದ ಅಗ್ರಮಾನ್ಯ ಕವಿಗಳಲ್ಲಿ ಒಬ್ಬರು. ಕವಿ, ನಾಟಕಕಾರ, ಕಾದಂಬರಿಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದಾರೆ. ‘ರಾಮಾಯಣ ದರ್ಶನಂ’ ಹಾಗೂ ‘ಮಲೆಗಳಲಿ ಮದುಮಗಳು’ ಕೃತಿ ಮೂಲಕ ಮಾನವೀಯ ಮೌಲ್ಯಗಳ ಅರಿವು ಮೂಡಿಸಿದ್ದಾರೆ ಎಂದರು.

ಸಾಹಿತ್ಯ ಪರಿಷತ್ ಹೋಬಳಿ ಘಟಕದ ಸಹ ಕಾರ್ಯದರ್ಶಿ ರಾಕೇಶ್ ಮಾತನಾಡಿ, ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕೀರ್ತಿ ಕುವೆಂಪು ಅವರಾದ್ದಾಗಿದ್ದು, ಕುವೆಂಪು ಅವರ ಬರವಣಿಗೆ ಮೂಲಕ ಕನ್ನಡ ಭಾಷೆ ಶ್ರೀಮಂತಗೊಳಿಸಿದ್ದಾರೆ. ಜಾತಿ-ಧರ್ಮ ಮೀರಿ ವಿಶ್ವಮಾನವರಾದರು ಎಂದರು.

ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಅಧ್ಯಕ್ಷ ಗಂಗಾಧರ್ ವಿ.ರೆಡ್ಡಿಹಳ್ಳಿ, ಗೌರವ ಕಾರ್ಯದರ್ಶಿ ಎಸ್.ಮಧು, ಖಜಾಂಚಿ ರಾಮು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು‍ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT