ಸೋಮವಾರ, ಮಾರ್ಚ್ 1, 2021
25 °C

ತುಮಕೂರು: ಪೌರ ಕಾರ್ಮಿಕರಿಗೆ ಸಮವಸ್ತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ತುಮಕೂರು ಮರ್ಚೆಂಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್‌ (ಟಿಎಂಸಿಸಿ)ನಿಂದ ಗುರುವಾರ ಸಮವಸ್ತ್ರಗಳನ್ನು ವಿತರಿಸಲಾಯಿತು.

ಆರೋಗ್ಯ ಕಾಪಾಡಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಒಂದು ಸಾವಿರ ಪೌರ ಕಾರ್ಮಿಕರಿಗೆ ಸಮವಸ್ತ್ರ ಸೇರಿದಂತೆ ಅಗತ್ಯ ಸುರಕ್ಷಾ ಸಾಧನಗಳನ್ನು ನೀಡಲಾಗಿದೆ ಎಂದು ಟಿಎಂಸಿಸಿ ಅಧ್ಯಕ್ಷ ಎನ್.ಎಸ್.ಜಯಕುಮಾರ್ ತಿಳಿಸಿದರು.

₹ 12 ಲಕ್ಷ ವೆಚ್ಚದಲ್ಲಿ ಪೌರ ಕಾರ್ಮಿಕರಿಗೆ ಹೆಲ್ಮೆಟ್, ಗ್ಲೌಸ್, ಸಮವಸ್ತ್ರ, ಏಪ್ರಾನ್‌ಗಳನ್ನು ಖರೀದಿಸಿ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರ ಮೂಲಕ ಪಾಲಿಕೆ ಹಸ್ತಾಂತರಿಸಲಾಗಿದೆ ಎಂದರು.

ಪೌರ ಕಾರ್ಮಿಕರು ಸಾಧನಾ ಸಲಕರಣೆ ಹಾಗೂ ಸಮವಸ್ತ್ರ ಧರಿಸುವ ಮೂಲಕ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು