ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಪದವಿ ಕಾಲೇಜಿಗೆ ಉಪನ್ಯಾಸಕರ ಕೊರತೆ

ಅತಿಥಿ ಉಪನ್ಯಾಸಕರನ್ನು ನೇಮಿಸದ ರಾಜ್ಯ ಸರ್ಕಾರ: ಅನೇಕ ವಿಷಯಗಳಿಗೆ ಬೋಧಕರೆ ಇಲ್ಲ
Last Updated 18 ಜನವರಿ 2021, 1:23 IST
ಅಕ್ಷರ ಗಾತ್ರ

ತಿಪಟೂರು: 2020-21ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಿಗೆ ಅರೆಕಾಲಿಕ ಅತಿಥಿ ಉಪನ್ಯಾಸಕರನ್ನು ನೇಮಿಸಲಾಗಿದೆ. ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡದೇ ತಾರತಮ್ಯ ತೋರಲಾಗಿದೆ ಎಂದು ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರು ಆರೋಪಿಸಿದ್ದಾರೆ.

ಆನ್‍ಲೈನ್ ಮೂಲಕ ಪದವಿ ವಿದ್ಯಾರ್ಥಿಗಳಿಗೆ ತರಗತಿ ಪ್ರಾರಂಭಿಸಿರುವ ತುಮಕೂರು ವಿಶ್ವವಿದ್ಯಾಲಯದ ತಿಪಟೂರು ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅನೇಕ ವಿಷಯಗಳಿಗೆ ಉಪನ್ಯಾಸಕರೇ ಇಲ್ಲದಂತಾಗಿದೆ. ಕಾಲೇಜಿನಲ್ಲಿ 3,800 ವಿದ್ಯಾರ್ಥಿಗಳಿದ್ದರೆ, ಅಧ್ಯಾಪಕರ ಸಂಖ್ಯೆ ಕೇವಲ 45.

ಲಾಕ್‍ಡೌನ್‍ನಿಂದಾಗಿ ಪದವಿ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 1ರಿಂದ ಆನ್‍ಲೈನ್ ತರಗತಿಗಳನ್ನು ಪ್ರಾರಂಭಿಸಲಾಗಿತ್ತು. ಆದರೆ ಕಾಲೇಜಿನಲ್ಲಿ ಅಧ್ಯಾಪಕರ ಕೊರತೆಯಿದ್ದು ಅತಿಥಿ ಉಪನ್ಯಾಸಕರ ಮೂಲಕವೇ ತರಗತಿಗಳನ್ನು ಹಿಂದಿನಿಂದ ನಡೆಸಿಕೊಂಡು ಬರುತ್ತಿದ್ದರು. ಆದರೆ ರಾಜ್ಯಸರ್ಕಾರ ಇದೀಗ ಕೇವಲ ಸರ್ಕಾರಿ ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಿಗೆ ಮಾತ್ರ ಅರೆಕಾಲಿಕ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರುಗಳ ತಾತ್ಕಾಲಿಕ ನೇಮಕಾತಿ ಮಾಡಿಲ್ಲ. ವಿದ್ಯಾರ್ಥಿಗಳು ಕಾಲೇಜಿಗೆ ಬಂದರೂ ಕೆಲವೇ ವಿಷಯಗಳ ಪಾಠವನ್ನು ಕೇಳಿ ಮನೆಗೆ ಹಿಂತಿರುಗುವಂತಾಗಿದೆ.

ಮೂರು ವರ್ಷದ ಪದವಿಯಲ್ಲಿ ಕಲಾ, ವಿಜ್ಞಾನ, ವಾಣಿಜ್ಯ ಸೇರಿದಂತೆ ಸುಮಾರು 260ಕ್ಕೂ ಹೆಚ್ಚು ಪುಸ್ತಕಗಳು, 100ಕ್ಕೂ ಅಧಿಕ ವಿಷಯಗಳನ್ನು ಬೋಧಿಸಲಾಗುತ್ತದೆ. ರಸಾಯನ ವಿಜ್ಞಾನ, ಹಿಂದಿ, ಉರ್ದು, ಪತ್ರಿಕೋದ್ಯಮ, ಜೀವವಿಜ್ಞಾನ ಸೇರಿದಂತೆ ಅನೇಕ ವಿಷಯಗಳಿಗೆ ಉಪನ್ಯಾಸಕರಿಲ್ಲ. ಕಾಲೇಜು ಪ್ರಾರಂಭವಾಗಿ ತಿಂಗಳುಗಳೇ ಕಳೆದರೂ ತರಗತಿ ಪ್ರಾರಂಭವಾಗಿಲ್ಲ. ಇನ್ನೆರೆಡು ತಿಂಗಳಲ್ಲಿ ಸೆಮಿಸ್ಟರ್ ಪರೀಕ್ಷೆಗಳು ಬರಲಿದ್ದು ಹೇಗೆ ಪರೀಕ್ಷೆ ಎದುರಿಸುವುದು ಎಂಬ ಆತಂಕ ವಿದ್ಯಾರ್ಥಿಗಳಿಗೆ ಎದುರಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT