ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಸಿದು ಬಿದ್ದು ಬಾಣಂತಿ ಸಾವು

Last Updated 6 ಮಾರ್ಚ್ 2020, 12:27 IST
ಅಕ್ಷರ ಗಾತ್ರ

ಕುಣಿಗಲ್: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಬಾಣಂತಿ ತಾಲ್ಲೂಕಿನ ಮಾರ್ಕೋನಹಳ್ಳಿಯ ಜ್ಯೋತಿ (24) ಕುಸಿದು ಬಿದ್ದು ಶುಕ್ರವಾರ ಮೃತಪಟ್ಟಿದ್ದಾರೆ.

ಫೆ. 19ರಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಣ್ಣು ಮಗು ಜನಿಸಿತ್ತು. ಇದೇ 4ರಂದು ಅನಾರೋಗ್ಯದ ಕಾರಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ಜ್ಯೋತಿ, ಶುಕ್ರವಾರ ಬೆಳಿಗ್ಗೆ ಕುಸಿದು ಬಿದ್ದು ಚಿಂತಾಜನಕ ಸ್ಥಿತಿ ತಲುಪಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ ಸಮಯದಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿ ಗಣೇಶ್ ಬಾಬು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT