ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನಕ್ಕೆ ಆಗ್ರಹಿಸಿ ಕಾರ್ಮಿಕ ಮಹಿಳೆಯರ ಪ್ರತಿಭಟನೆ

Last Updated 5 ಜೂನ್ 2020, 11:05 IST
ಅಕ್ಷರ ಗಾತ್ರ

ಕುಣಿಗಲ್: ವೇತನಕ್ಕಾಗಿ ಆಗ್ರಹಿಸಿ ತಾಲ್ಲೂಕಿನ ಕಾಲ್ಸ್ ಡಿಸ್ಟಿಲರಿಸ್‌ನ ಮಹಿಳಾ ಕಾರ್ಮಿಕರು ಕಾರ್ಖಾನೆ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಅವರೆಗೆರೆ ಬಳಿಯ ಬಾಟ್ಲಿಂಗ್ ಘಟಕದಲ್ಲಿ ಲಾಕ್‌ಡೌನ್ ಅವಧಿಯಲ್ಲಿ ಪಾಳಿ ಮೇಲೆ ಕೆಲಸ ಮಾಡಿದ್ದರೂ, ಸಕಾಲದಲ್ಲಿ ಸಮರ್ಪಕವಾಗಿ ವೇತನ ನೀಡಿಲ್ಲ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಂ ಮತ್ತು ಅಮೃತೂರು ಪಿಎಸ್ಐ ಮಂಜು ಸ್ಥಳಕ್ಕೆ ಧಾವಿಸಿ ಮಹಿಳೆಯರ ಸಮಸ್ಯೆ ಆಲಿಸಿದರು.

ಮುಖಂಡರು, ವ್ಯವಸ್ಥಾಪಕ ರೊಂದಿಗೆ ಚರ್ಚಿಸಿ ವೇತನ ಪಾವತಿಗೆ ಒಪ್ಪಿಕೊಂಡ ನಂತರ ಪ್ರತಿಭಟನೆ ಹಿಂಪಡೆದರು.

ಪಿಎಸ್ಐ ಮಂಜು, ಕಂಪನಿ ಸಿಬ್ಬಂದಿ ಕಾರ್ಮಿಕರಿಗೆ ಕಿರುಕುಳ ನೀಡಿದರೆ ಗಮನಕ್ಕೆ ತರುವಂತೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT