ಸೋಮವಾರ, ಜನವರಿ 20, 2020
27 °C

ರಾಜ್ಯದ ಪರವಾಗಿ ಲಕ್ಷ್ಮಣ ಸವದಿ ಪ್ರಶಸ್ತಿ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ತುಮಕೂರು: ರಾಜ್ಯವು ಕೃಷಿ ಕರ್ಮಣ್ಯ ಪ್ರಶಸ್ತಿ ಪಡೆದಿದ್ದು ರಾಜ್ಯದ ಪರವಾಗಿ ಉಪಮುಖ್ಯಮಂತ್ರಿಯೂ ಆದ ಕೃಷಿ ಸಚಿವ ಲಕ್ಷ್ಮಣ ಸವದಿ ಪ್ರಶಸ್ತಿ ಸ್ವೀಕರಿಸುವರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗುರುವಾರ ನಡೆಯಲಿರುವ ಕೃಷಿ ಸಮ್ಮಾನ್ ಕಾರ್ಯಕ್ರಮದಲ್ಲಿ 16 ಮಹಿಳಾ ರೈತರು ಹಾಗೂ 16 ಪುರುಷ ರೈತರಿಗೆ ಕೃಷಿ ಕರ್ಮಣ್ಯ ಪ್ರಶಸ್ತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರದಾನ ಮಾಡುವರು ಎಂದರು.

ಕೇಂದ್ರ ಕೃಷಿ ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. 3 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ 12 ರಾಜ್ಯದ ಕೃಷಿ ಸಚಿವರು ಭಾಗವಹಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು