ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಕ್ಕೇನಹಳ್ಳಿ ಅಹೋಬಲ ಲಕ್ಷ್ಮಿರಂಗನಾಥ ರಥೋತ್ಸವ

Published 24 ಮಾರ್ಚ್ 2024, 7:56 IST
Last Updated 24 ಮಾರ್ಚ್ 2024, 7:56 IST
ಅಕ್ಷರ ಗಾತ್ರ

ಮಧುಗಿರಿ: ತಾಲ್ಲೂಕಿನ ದೊಡ್ಡೇರಿ ಹೋಬಳಿ ಜಕ್ಕೇನಹಳ್ಳಿ ಅಹೋಬಲ ಲಕ್ಷ್ಮಿ ರಂಗನಾಥ ಸ್ವಾಮಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ವಿಜೃಂಭಣೆಯಿಂದ ನೆರವೇರಿತು.

ದೇವಸ್ಥಾನದಲ್ಲಿ ನಟ ಅರ್ಜುನ್ ಸರ್ಜಾ ಮತ್ತು ಧೃವ ಸರ್ಜಾ ಕುಟುಂಬ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ಅರ್ಚನೆ, ಅಭಿಷೇಕ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.

ದೇವರಿಗೆ ಮತ್ತು ರಥಕ್ಕೆ ವಿವಿಧ ಪುಷ್ಪಾಲಂಕಾರ ಮಾಡಲಾಗಿತ್ತು. ದೇವಸ್ಥಾನವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ದೇವರ ಉತ್ಸವ ಮೂರ್ತಿಯನ್ನು ರಥದ ಸುತ್ತ ಪ್ರದಕ್ಷಿಣೆ ಹಾಕಿಸಿ, ಉತ್ಸವಮೂರ್ತಿಯನ್ನು ರಥದ ಮೇಲೆ ಕೂರಿಸಿ ವಿಶೇಷ ಪೂಜೆ ಸಲ್ಲಿಸಿದರು. ತೇರು ಎಳೆಯುವ ಮೂಲಕ ಭಕ್ತಿ ಮೆರೆದರು. ದೂರದ ಊರುಗಳಿಂದ ಹಾಗೂ ತಾಲ್ಲೂಕಿನ ಸುತ್ತಮುತ್ತಲಿನ ಸಾವಿರಾರು ಭಕ್ತರು ಪಾಲ್ಗೊಂಡು ಸಂಭ್ರಮಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT