ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಧುಗಿರಿ: ಪುರಸಭೆ ಅಧ್ಯಕ್ಷರಾಗಿ ಲಾಲಾಪೇಟೆ ಮಂಜುನಾಥ್ ಆಯ್ಕೆ

Published 31 ಆಗಸ್ಟ್ 2024, 14:32 IST
Last Updated 31 ಆಗಸ್ಟ್ 2024, 14:32 IST
ಅಕ್ಷರ ಗಾತ್ರ

ಮಧುಗಿರಿ: ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಲಾಲಾಪೇಟೆ ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಸುಜಾತ ಎಂ.ಎಸ್.ಶಂಕರನಾರಾಯಣ ಅವಿರೋಧವಾಗಿ ಶನಿವಾರ ಆಯ್ಕೆಯಾದರು.

ಜೆಡಿಎಸ್‌ನಿಂದ ಪುರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ ಲಾಲಾಪೇಟೆ ಮಂಜುನಾಥ್ ಅವರು, ಜೆಡಿಎಸ್ ತ್ಯಜಿಸಿ ಕೆ.ಎನ್.ರಾಜಣ್ಣ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅಂದಿನಿಂದಲೂ ಕಾಂಗ್ರೆಸ್ ನಿಷ್ಠಾವಂತರಾಗಿದ್ದ ಲಾಲಾಪೇಟೆ ಮಂಜುನಾಥ್ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಗೋಟೊರು ಶಿವಪ್ಪ ಕಾರ್ಯನಿರ್ವಹಿಸಿದರು.

ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಮಾತನಾಡಿ, ‘ಎಲ್ಲ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕೆಂಬ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಆಶಯದಂತೆ ಪುರಸಭೆಯಲ್ಲಿ ಕುಂಚಿಟಿಗ ಸಮುದಾಯಕ್ಕೆ ಸೇರಿದ ಲಾಲಾಪೇಟೆ ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ. ಪಟ್ಟಣದ ಅಭಿವೃದ್ಧಿಗಾಗಿ ₹25 ಕೋಟಿ, ರಾಜೀವ್ ಗಾಂಧಿ ಕ್ರೀಡಾಂಗಣ ಅಭಿವೃದ್ಧಿಗೆ ₹10 ಕೋಟಿ, 500 ಮನೆಗಳು ಮಂಜೂರಾಗಿದ್ದು, ತಾಲ್ಲೂಕಿಗೆ 4 ಸಾವಿರ ಮನೆಗಳು ಮಂಜೂರಾಗಿವೆ’ ಎಂದರು.

ಮನೆಗಳನ್ನು ಹಂಚಿಕೆ ಮಾಡುವಾಗ ಪಕ್ಷಾತೀತ ಮತ್ತು ಬಡವರಿಗೆ ವಿವರಣೆ ಮಾಡಬೇಕು. ದೊಡ್ಡೇರಿ ಹೋಬಳಿ ಎಂಟು ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಡಿ ನೀರು ತುಂಬಿಸಲು ₹116 ಕೋಟಿ ಬಿಡುಗಡೆಯಾಗಿದೆ ಎಂದರು.

ಲಾಲಾಪೇಟೆ ಮಂಜುನಾಥ್ ಮಾತನಾಡಿ, ‘ಪಟ್ಟಣದ ಅಭಿವೃದ್ಧಿಗೆ ಎಲ್ಲ ಸದಸ್ಯರ ವಿಶ್ವಾಸದೊಂದಿಗೆ ಉತ್ತಮವಾದ ಕೆಲಸ- ಕಾರ್ಯ ಮಾಡುತ್ತೇನೆ’ ಎಂದು ತಿಳಿಸಿದರು.

ಪುರಸಭೆ ಉಪಾಧ್ಯಕ್ಷ ಸುಜಾತ ಎಂ.ಎಸ್.ಶಂಕರನಾರಾಯಣ, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಎನ್.ಗಂಗಣ್ಣ, ಎಂ.ವಿ.ಗೋವಿಂದರಾಜು, ಅಯೂಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿನಾರಾಯಣ ರೆಡ್ಡಿ, ಗೋಪಾಲಯ್ಯ, ಜಿ.ಪಂ.ಮಾಜಿ ಅಧ್ಯಕ್ಷ ಜಿ.ಜೆ.ರಾಜಣ್ಣ, ನಿರ್ದೇಶಕ ಬಿ.ನಾಗೇಶಬಾಬು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT