ಮಧುಗಿರಿ: ಇಲ್ಲಿನ ಪುರಸಭೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಲಾಲಾಪೇಟೆ ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಸುಜಾತಾ ಎಂ.ಎಸ್.ಶಂಕರ ನಾರಾಯಣ ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಶನಿವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸುಜಾತಾ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು.
ಇಬ್ಬರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಕಾರ್ಯನಿರ್ವಹಿಸಿದರು.