ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಡಿಡಿಗೆ ಭೂಮಿ ಮಂಜೂರು

Last Updated 9 ಜೂನ್ 2021, 3:04 IST
ಅಕ್ಷರ ಗಾತ್ರ

ತುಮಕೂರು: ಯುದ್ಧ ವಿಮಾನಗಳು ಹಾಗೂ ಇತರೆ ರಕ್ಷಣಾ ಕ್ಷೇತ್ರಕ್ಕೆ ಬೇಕಾದ ಹೈ ಎಂಡ್ ಕಟಿಂಗ್ ಟೂಲ್ಸ್ ಉತ್ಪಾದನೆಗೆ ಸಂಬಂಧಿಸಿದ ಘಟಕ ಸ್ಥಾಪಿಸಲು ಎಡಿಸಿ ಎಂಜಿನಿಯರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ನಗರದ ಹೊರ ವಲಯದ ಮಶಿನ್ ಟೂಲ್ಸ್ ಪಾರ್ಕ್‌ನಲ್ಲಿ ಭೂಮಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ.

ಕೆಐಎಡಿಬಿ ಭೂಮಿ ಮಂಜೂರು ಮಾಡಿದ್ದು, ಇದಕ್ಕೆ ಸಂಬಂಧಿಸಿದ ಕಾಗದ ಪತ್ರಗಳನ್ನು ಕೆಐಎಡಿಬಿ ಅಧಿಕಾರಿಗಳು ಎಇಐಪಿಎಲ್ ಕಂಪನಿ ನಿರ್ದೇಶಕ ಗಿರೀಶ್ ಲಿಂಗಣ್ಣ ಅವರಿಗೆ ಹಸ್ತಾಂತರಿಸಿದರು.

ನೆಲಮಂಗಲ ಕೈಗಾರಿಕಾ ಪ್ರದೇಶದಲ್ಲಿ ಭೂಮಿ ನೀಡುವಂತೆ ಸಂಸ್ಥೆ ಮಾಡಿದ ಮನವಿಗೆ ಕೆಐಎಡಿಬಿ ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಇದೊಂದು ಮಹತ್ವದ ರಾಷ್ಟ್ರೀಯ ಯೋಜನೆ ಎಂಬುದನ್ನು ಪರಿಗಣಿಸಿ ರಾಜ್ಯ ಸರ್ಕಾರ ಭೂಮಿ ಮಂಜೂರು ಮಾಡುವಂತೆ ಸಲಹೆ ಮಾಡಿತ್ತು ಎಂದು ಕಂಪನಿ ಪ್ರಕಟಣೆ ತಿಳಿಸಿದೆ.

ಎಡಿಡಿ ಎಂಜಿನಿಯರಿಂಗ್ ಇಂಡಿಯಾ ಸಂಸ್ಥೆಯು ರಷ್ಯಾದಲ್ಲಿ ಶಾಖೆಯನ್ನು ಹೊಂದಿರುವ ಜರ್ಮನ್ ಮೂಲದ ಎಡಿಡಿ ಎಂಜಿನಿಯರಿಂಗ್ ಜಿಎಂಬಿಎಚ್‌ನ ಅಂಗ ಸಂಸ್ಥೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT