ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳುವನೆರಲು: ಜಮೀನು ವಿವಾದ– ತಮ್ಮನನ್ನು ಕೊಂದ ಅಣ್ಣ

Last Updated 29 ಮಾರ್ಚ್ 2023, 6:02 IST
ಅಕ್ಷರ ಗಾತ್ರ

ತಿಪಟೂರು: ಜಮೀನಿನ ವಿವಾದವು ತಮ್ಮನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಬಳುವನೆರಲು ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಚಂದ್ರಪ್ಪ(63) ಕೊಲೆಯಾದವರು. ಅಣ್ಣ ರಾಮೇಗೌಡ ಮತ್ತು ಚಂದ್ರಪ್ಪ ಅವರ ನಡುವೆ ಜಮೀನು ಹಂಚಿಕೆ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಬೆಳಿಗ್ಗೆ ಕೂಡ ಇಬ್ಬರ ನಡು‌ವೆ ಜಗಳವಾಗಿದೆ. ರಾಮೇಗೌಡ ಬಲವಾದ ಆಯುಧದಿಂದ ಚಂದ್ರಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದರಿಂದ ಅವರು ಮೃತಪಟ್ಟಿದ್ದಾರೆ.

ಆರೋಪಿ ರಾಮೇಗೌಡನನ್ನು ‍ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಹೊನ್ನವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT