ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಸಂಪರ್ಕ ಕೇಂದ್ರ ಕಟ್ಟಡಕ್ಕೆ ಭೂಮಿಪೂಜೆ

Last Updated 12 ಏಪ್ರಿಲ್ 2022, 3:08 IST
ಅಕ್ಷರ ಗಾತ್ರ

ಕೊಡಿಗೇನಹಳ್ಳಿ: ‘ಐಡಿಹಳ್ಳಿ ಹೋಬಳಿ ಹಿಂದುಳಿದ ಪ್ರದೇಶವಾಗಿದ್ದು, ಆಂಧ್ರದ ಗಡಿಭಾಗದಲ್ಲಿರುವುದರಿಂದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ’ ಎಂದು ಶಾಸಕ ಎಂ.ವಿ. ವೀರಭದ್ರಯ್ಯ ತಿಳಿಸಿದರು.

ಮಧುಗಿರಿ ತಾಲ್ಲೂಕಿನ ಐಡಿಹಳ್ಳಿ ಗ್ರಾಮದಲ್ಲಿ ಸೋಮವಾರ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡಕ್ಕೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಕುಮಾರಸ್ವಾಮಿ ಸರ್ಕಾರವಿದ್ದಾಗ ಕ್ಷೇತ್ರಕ್ಕೆ ಹೆಚ್ಚು ಅನುದಾನ ಹರಿದು ಬಂತು. ನಂತರ ಬದಲಾದ ರಾಜಕೀಯ ವಿದ್ಯಮಾನ ಮತ್ತು ಕೊರೊನಾದಿಂದ ಕ್ಷೇತ್ರಕ್ಕೆ ಅನುದಾನ ತರುವುದರಲ್ಲಿ ಹಿನ್ನಡೆಯಾಯಿತು. ಬಿಜೆಪಿಯವರು ನಮ್ಮ ಕಡೆ ಲಕ್ಷ್ಯ ನೀಡದಿದ್ದರೂ ಅಧಿಕಾರಿಗಳ ಒಡನಾಟದಿಂದ ಕ್ಷೇತ್ರಕ್ಕೆ ಒಂದಷ್ಟು ಅನುದಾನ ತರುತ್ತಿದ್ದೇನೆ. ಇಂತಹ ಪರಿಸ್ಥಿತಿಯಲ್ಲೂ ಅನುದಾನದಲ್ಲಿ ಐಡಿಹಳ್ಳಿ ಹೋಬಳಿಗೆ ಹೆಚ್ಚು ಆದ್ಯತೆ ನೀಡಿರುವುದು ತೃಪ್ತಿ ನೀಡಿದೆ’ ಎಂದರು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹನುಮಂತರಾಯಪ್ಪ, ಕೃಷಿ ಅಧಿಕಾರಿ ಮದನ್ ಕುಮಾರ್, ಕೃಷಿಕ ಸಮಾಜದ ಅಧ್ಯಕ್ಷ ಚೆನ್ನಲಿಂಗಪ್ಪ, ಸದಸ್ಯರಾದ ಸಿದ್ದಾರೆಡ್ಡಿ, ಉಮೇಶ್, ಪಿಡಿಒ ಪ್ರಕಾಶ್, ಗ್ರಾಮ ಪಂಚಾಯಿತಿ ಸದಸ್ಯ ಜೀಲಾನ್ ಸಾಬ್,ಮುಖಂಡರಾದ ರಂಗರೆಡ್ಡಿ, ಆರ್.ಕೆ. ರೆಡ್ಡಿ, ರಾಮಚಂದ್ರಪ್ಪ, ವಜೀರ್ ಸಾಬ್, ಬಾಲಕೃಷ್ಣ, ವಕೀಲ ನರಸಿಂಹಮೂರ್ತಿ, ಮಂಜುನಾಥ್, ಲಿಂಗಯ್ಯ, ತಾಡಿ ನಾಗರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT