ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರ ಬದುಕು ಬೀದಿಗೆ: ದೇವೇಗೌಡ

Last Updated 20 ಆಗಸ್ಟ್ 2020, 8:45 IST
ಅಕ್ಷರ ಗಾತ್ರ

ತುಮಕೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ಈಗಾಗಲೇ ಪಕ್ಷದಿಂದ ಜಿಲ್ಲಾ ಮಟ್ಟದಲ್ಲಿ ಹೋರಾಟ ನಡೆಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಹೋರಾಟ ಪೂರ್ಣವಾದ ತರುವಾಯ ತಾಲ್ಲೂಕು ಮಟ್ಟದಲ್ಲಿ ಹೋರಾಟ ನಡೆಸುತ್ತೇವೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದರು.

ನಗರದಲ್ಲಿ ಗುರುವಾರ ಜೆಡಿಎಸ್‌ನಿಂದ ಶಿರಾ ಶಾಸಕ ಬಿ.ಸತ್ಯನಾರಾಯಣ ಅವರಿಗೆ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಹಾಗೂ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆಯಲ್ಲಿ ಮಾತನಾಡಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಈ ವಿಚಾರಗಳನ್ನೂ ಪಕ್ಷ ಮುಂದಿಟ್ಟುಕೊಂಡು ಚುನಾವಣೆ ಎದುರಿಸಲಿದೆ.

ಭೂ ಮಾಫಿಯಾಗಳಿಗೆ ಮತ್ತು ಭ್ರಷ್ಟಾಚಾರದಿಂದ ಹಣ ಮಾಡಿರುವವರಿಗೆ ಅನುಕೂಲ ಕಲ್ಪಿಸಲು ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಕಾರ್ಮಿಕರು ರೈತರ ಬದುಕು ಬೀದಿಗೆ ಬರಲಿದೆ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT