ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾರದಿಂದ ನಡೆಯುತ್ತಿದ್ದ ಧರಣಿ ವಾಪಸ್

ವಿವಿಧ ಬೇಡಿಕೆ ಈಡೇರಿಸುವ ಕುರಿತು ಡಿಸಿ ಭರವಸೆ
Published 27 ಜೂನ್ 2024, 4:21 IST
Last Updated 27 ಜೂನ್ 2024, 4:21 IST
ಅಕ್ಷರ ಗಾತ್ರ

ತುಮಕೂರು: ‘ನಿವೇಶನ ಹಂಚಿಕೆ, ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಭರವಸೆ ನೀಡಿದ ನಂತರ ಒಂದು ವಾರದಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ಬುಧವಾರ ಕೈ ಬಿಡಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜೂನ್‌ 18ರಂದು ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯಿಂದ ಧರಣಿ ಆರಂಭಿಸಲಾಗಿತ್ತು. ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲೊನಿ, ಹೊಳವನಹಳ್ಳಿ ಗ್ರಾಮಗಳ ಗುಡಿಸಲು ವಾಸಿಗಳು ನೀರು, ವಿದ್ಯುತ್‌, ನಿವೇಶನ, ವಸತಿಗಾಗಿ ಬೀದಿಗೆ ಬಂದಿದ್ದರು.

‘ಅರ್ಹರಿಗೆ ನಿವೇಶನ ಸೌಲಭ್ಯ ಕಲ್ಪಿಸಲು ಜಿಲ್ಲೆಯಲ್ಲಿ ಈವರೆಗೂ 2 ಸಾವಿರ ಎಕರೆ ಪ್ರದೇಶ ಗುರುತಿಸಲಾಗಿದೆ. ಇದರಿಂದ ಸುಮಾರು 30 ಸಾವಿರ ನಿವೇಶನ ಹಂಚಿಕೆ ಮಾಡಬಹುದು. ಎಲ್ಲ ತಾಲೂಕಿನಲ್ಲಿ ಆಶ್ರಯ ಸಮಿತಿ ಸಭೆ ನಡೆಸಿ ಪಾರದರ್ಶಕವಾಗಿ, ವ್ಯವಸ್ಥಿತವಾಗಿ ನಿವೇಶನ ಹಂಚಿಕೆ ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

‘ಮಧುಗಿರಿ ತಾಲ್ಲೂಕಿನಲ್ಲಿ 10 ತಿಂಗಳು ಕಳೆದರೂ ಆಶ್ರಯ ಸಮಿತಿ ಸಭೆ ನಡೆದಿಲ್ಲ. ಜುಲೈ 5ರಂದು ಸಮಿತಿ ಸಭೆ ನಡೆಸಿ ನಿವೇಶನ ವಂಚಿತ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಪಟ್ಟಿ ಸಲ್ಲಿಸಬೇಕು’ ಎಂದು ಸೂಚಿಸಿದ್ದಾರೆ.

ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಹಂದ್ರಾಳ್‌ ನಾಗಭೂಷಣ್‌, ‘ತುಮಕೂರು, ಮಧುಗಿರಿ, ಕೊರಟಗೆರೆ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಮೂರು ತಲೆಮಾರುಗಳಿಂದ ವಾಸವಿರುವ ಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸಿಲ್ಲ. ಅರ್ಹರಿಗೆ ನಿವೇಶನ, ಸಾಗುವಳಿ ಚೀಟಿ, ಖಾತೆ, ಪಹಣಿ ಸೌಲಭ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್‌, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್‌.ಕೃಷ್ಣಪ್ಪ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT