ಅಧಿವೇಶನದಲ್ಲಿ ಪ್ರತಿಧ್ವನಿಸಿದ ಲಾಠಿ ಪ್ರಹಾರ ಪ್ರಕರಣ

7

ಅಧಿವೇಶನದಲ್ಲಿ ಪ್ರತಿಧ್ವನಿಸಿದ ಲಾಠಿ ಪ್ರಹಾರ ಪ್ರಕರಣ

Published:
Updated:
ಜಿ.ಬಿ.ಜ್ಯೋತಿಗಣೇಶ್

ತುಮಕೂರು: ನಗರದ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಶನಿವಾರ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಪ್ರಹಾರದ ಬಗ್ಗೆ ವಿಧಾನಸಭೆಯಲ್ಲಿ ಸೋಮವಾರ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಪ್ರಸ್ತಾಪಿಸಿ ಖಂಡಿಸಿದರು.

ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಏಕಾಏಕಿ ಹತ್ತಿಕ್ಕಲು ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ. ಅಸಭ್ಯವಾಗಿ ವರ್ತಿಸಿದ್ದಾರೆ. ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಿದ್ದು ಸರಿಯಲ್ಲ ಎಂದು ಹೇಳಿದರು.

ಸರ್ಕಾರ ಕೂಡಲೇ ಖಾಸಗಿ ವಿದ್ಯಾ ಸಂಸ್ಥೆಗಳಿಗೆ ನೀಡಿರುವ ನೋಟಿಸ್‌ ಹಿಂದಕ್ಕೆ ಪಡೆಯಬೇಕು. ವಿದ್ಯಾರ್ಥಿಗಳು, ಎಬಿವಿಪಿ ಕಾರ್ಯಕರ್ತರ ಮೇಲೆ ಹಾಕಿರುವ ಪ್ರಕರಣಗಳನ್ನು ತಕ್ಷಣವೇ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಸರ್ಕಾರದ ಪರವಾಗಿ ಉತ್ತರಿಸಿದ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ‘ಈ ಪ್ರಕರಣ ಸಾರಿಗೆ ನಿಗಮಕ್ಕೆ ಬರುವುದಿಲ್ಲ. ಗೃಹ ಖಾತೆಗೆ ಬರಲಿದ್ದು, ಗೃಹ ಸಚಿವರೇ ಉತ್ತರ ನೀಡುವರು’ ಎಂದು ಹೇಳಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !