ನಾಯಕರು ಅಭಿವೃದ್ಧಿಯತ್ತ ಗಮನ ಹರಿಸಲಿ

7

ನಾಯಕರು ಅಭಿವೃದ್ಧಿಯತ್ತ ಗಮನ ಹರಿಸಲಿ

Published:
Updated:
Prajavani

ತುಮಕೂರು: ಕರ್ನಾಟಕದಲ್ಲಿ ರಾಜಕೀಯ ನಾಯಕರ ಕಿತ್ತಾಟ, ರಾಜಕೀಯ ಅರಾಜತೆಯಿಂದ ರಾಜ್ಯದ ಅಭಿವೃದ್ಧಿಯತ್ತ ಗಮನ ಸಾಧ್ಯವಾಗುತ್ತಿಲ್ಲ. ಕೂಡಲೇ ಗೊಂದಲಗಳನ್ನು ಪರಿಹರಿಸಿಕೊಂಡು ಅಭಿವೃದ್ಧಿಯತ್ತ ಗಮನ ಹರಿಸಬೇಕು ಎಂದು ಕರ್ನಾಟಕ ವೀರಶೈವ–ಲಿಂಗಾಯತ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್‌ ಒತ್ತಾಯಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿರೋಧಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಪರಸ್ಪರ ಆಡಿಯೊ, ವಿಡಿಯೊದಂತಹ ಆರೋಪಗಳನ್ನು ಮಾಡುವುದನ್ನು ಬಿಟ್ಟು, ಬರದಿಂದ ತತ್ತರಿಸುತ್ತಿರುವ ರಾಜ್ಯದ ಜನರಿಗೆ ಉತ್ತಮ ಆಡಳಿತ ನೀಡಬೇಕು’ ಎಂದರು.

ವೇದಿಕೆ ರಾಜ್ಯ ಸಂಚಾಲಕ ವಿಜಯಕುಮಾರ್, ಉಪಾಧ್ಯಕ್ಷ ಟಿ.ಆರ್.ಸದಾಶಿವಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಪರಮೇಶ್ವರ್‌, ಸಂಚಾಲಕ ಅಭಿಲಾಷ್ ಗೋಷ್ಠಿಯಲ್ಲಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !