ರಾಮಕೃಷ್ಣಪ್ಪ ಮತ್ತು ಶಿವಣ್ಣ ಗಾಯಗೊಂಡವರು. ರಾತ್ರಿ ಊಟ ಮುಗಿಸಿಕೊಂಡು ಮನೆಯಿಂದ ಹೊರ ಬಂದಾಗ ಚಿರತೆ ದಾಳಿ ನಡೆಸಿದೆ. ತಕ್ಷಣವೇ ಗ್ರಾಮಸ್ಥರು ಚಿರತೆಯನ್ನು ಓಡಿಸಿದ್ದಾರೆ. ಶಿರಾ, ತುಮಕೂರು ಮತ್ತು ಬೆಂಗಳೂರು ಅಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.