ಗುಬ್ಬಿ: ತಾಲ್ಲೂಕಿನ ಸಿಎಸ್ ಪುರ ಹೋಬಳಿ ವಿ. ಕೋಡಿಹಳ್ಳಿಯಲ್ಲಿ ಅರಣ್ಯ ಇಲಾಖೆಯವರು ಪೊಲೀಸ್ ಇಲಾಖೆ ನೆರವಿನೊಂದಿಗೆ ಗುರುವಾರ ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆಹಿಡಿದಿದ್ದಾರೆ.

ವ್ಯವಸ್ಥಿತ ಸಿದ್ಧತೆಯೊಂದಿಗೆ ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆಯವರು ಮಧ್ಯಾಹ್ನದ ವೇಳೆಗೆ ಚಿರತೆಯನ್ನು ಸೆರೆ ಹಿಡಿದರು.

ಬುಧವಾರ ಚಿರತೆಯೊಂದು ಗ್ರಾಮದ ಯುವಕನ ಮೇಲೆ ದಾಳಿ ನಡೆಸಿ ಗಾಯಗೊಳಿಸಿತ್ತು. ಇದರಿಂದ ಸಿಟ್ಟಿಗೆದ್ದ ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದರು.

ಗ್ರಾಮದ ಸಮೀಪದಲ್ಲಿಯೇ ಚಿರತೆ ಇರುವ ಸುಳಿವು ಅರಿತ ಗ್ರಾಮದ ಕೆಲವರು ಚಿರತೆಯನ್ನು ಓಡಿಸಲು ಬುಧವಾರ ಮುಂದಾಗಿದ್ದರು. ಆಗ ಚಿರತೆ ಯುವಕನ ಕಾಲಿಗೆ ಗಾಯಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.