ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗುಬ್ಬಿ: ಬೋನಿಗೆ ಬಿದ್ದ ಚಿರತೆ

Published 1 ಮೇ 2024, 12:34 IST
Last Updated 1 ಮೇ 2024, 12:34 IST
ಅಕ್ಷರ ಗಾತ್ರ

ಗುಬ್ಬಿ: ತಾಲ್ಲೂಕಿನ ಸಿಎಸ್ ಪುರ ಹೋಬಳಿ ನಾರನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಸುಮಾರು 3 ವರ್ಷದ ಚಿರತೆ ಬುಧವಾರ ಮುಂಜಾನೆ ಸೆರೆಯಾಗಿದೆ.

ಸುಮಾರು ದಿನಗಳಿಂದ ಈ ಭಾಗದಲ್ಲಿ ಚಿರತೆಯ ಕಾಟ ಹೆಚ್ಚಾಗಿ ಜನ, ಜಾನುವಾರುಗಳು ಹೊರಗಡೆ ತಿರುಗಾಡಲು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದ್ದರಿಂದ ಗ್ರಾಮಸ್ಥರು ಚಿರತೆ ಸೆರೆಗೆ ಆಗ್ರಹಿಸಿದ್ದರು.

ಬೋನಿಗೆ ಬಿದ್ದಿರುವ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸಮೀಪದಲ್ಲಿ ಬಿಟ್ಟರೆ ಮತ್ತೆ ಇಲ್ಲಿಗೆ ಬರುವ ಸಾಧ್ಯತೆ ಇರುವುದರಿಂದ ದೂರದ ಕಾಡಿಗೆ ಬಿಡಬೇಕು. ಪದೇ ಪದೇ ಚಿರತೆ ಕಾಣಿಸಿಕೊಳ್ಳುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸೂಕ್ತಕ್ರಮ ವಹಿಸಿ ಜನರ ಆತಂಕ ನಿವಾರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT