ಶನಿವಾರ, ಮಾರ್ಚ್ 28, 2020
19 °C

ಪದೇ ಪದೆ ದಾಳಿ ನಡೆಸಿ ಆತಂಕ ಸೃಷ್ಟಿಸಿದ್ದ ನರಭಕ್ಷಕ ಚಿರತೆ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ತುಮಕೂರು: ಜನ, ಜಾನುವಾರಗಳ ಮೇಲೆ ಪದೇ ಪದೆ ದಾಳಿ ನಡೆಸಿ ಆತಂಕ ಸೃಷ್ಟಿಸಿದ್ದ ಚಿರತೆಗಳ ಪೈಕಿ ಒಂದು ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ತುಮಕೂರು ಗ್ರಾಮಾಂತರ ಹೆಬ್ಬೂರು ಹೋಬಳಿ ಹಾಲನೂರು ಸಮೀಪ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಸ್ಥಳೀಯರು ಸೋಮವಾರ ಬೆಳಿಗ್ಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ. ಸ್ಥಳೀಯರು ಮಾಹಿತಿ ನೀಡಿದ್ದ ಸ್ಥಳದ ಸಮೀಪ ಕಾಲುವೆಯೊಂದರಲ್ಲಿ ಚಿರತೆ ಅಡಗಿಕೊಂಡಿರುವುದನ್ನು ಖಚಿತ ಪಡಿಸಿಕೊಂಡಿದ್ದಾರೆ.

ನಂತರ ಚಿರತೆ ತಪ್ಪಿಸಿಕೊಳ್ಳದಂತೆ ಕಾಲುವೆಯ 2 ಬದಿಯಲ್ಲಿ ಬಲೆ ಹಿಡಿದು ಚಿರತೆಗೆ ಅರಿವಳಿಕೆ ಮದ್ದು ನೀಡಿ ಸೆರೆ ಹಿಡಿದಿದ್ದಾರೆ. ಕಾರ್ಯಾಚರಣೆ ತಂಡದಲ್ಲಿ 2 ದಿನಗಳ ಹಿಂದೆಯಷ್ಟೇ ಡೆಹರಾಡೂನ್‌ನಿಂದ ಕರೆಸಿಕೊಂಡಿದ್ದ ವೈದ್ಯ ಸನತ್‌, ತುಮಕೂರು, ಗುಬ್ಬಿ, ಕುಣಿಗಲ್‌ನ ಆರ್‌ಎಫ್‌ಒ ಸೇರಿದಂತೆ 25 ಜನರಿದ್ದರು.

ನರಭಕ್ಷಕ ಚಿರತೆ ಸಾಧ್ಯತೆ

ಇದೀಗ ಸೆರೆಯಾಗಿರುವ ಚಿರತೆ ಜನರ ಮೇಲೆ ದಾಳಿ ಮಾಡಿದ ನರಭಕ್ಷಕ ಚಿರತೆ ಹೌದೋ, ಅಲ್ಲವೋ ಎನ್ನುವ ಚರ್ಚೆ ಆರಂಭವಾಗಿದೆ. ಆದರೆ, ಇತ್ತೀಚೆಗೆ ತುಮಕೂರು ತಾಲ್ಲೂಕು ಹೆಬ್ಬೂರು ಹೋಬಳಿ ಬೈಚೇನಹಳ್ಳಿಯಲ್ಲಿ ಮಗುವನ್ನು ಕೊಂದ ಸ್ಥಳದಿಂದ ಕೇವಲ 10 ಕಿ.ಮೀ ವ್ಯಾಪ್ತಿಯಲ್ಲಿ ಈ ಚಿರತೆ ಸೆರೆ ಸಿಕ್ಕಿದೆ. ಅಲ್ಲದೆ, ಇದು ಹೆಣ್ಣು ಚಿರತೆ ಆಗಿರುವುದರಿಂದ ನರಭಕ್ಷಕ  ಚಿರತೆಯೇ ಆಗಿರುವ ಸಾಧ್ಯತೆ ಇದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ‘ಪ್ರಜಾವಾಣಿ’ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು