ಶುಕ್ರವಾರ, ಮಾರ್ಚ್ 5, 2021
30 °C

ಶಿರಾ: ಲಾರಿಗೆ ಸಿಲುಕಿ ಚಿರತೆ ಸಾವು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾ (ತುಮಕೂರು): ತಾಲ್ಲೂಕಿನ ತಾವರೆಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ- 48ರಲ್ಲಿ ಮಂಗಳವಾರ ರಾತ್ರಿ ಲಾರಿಗೆ ಸಿಲುಕಿ ನಾಲ್ಕು ವರ್ಷದ ಚಿರತೆ ಮೃತ ಪಟ್ಟಿದೆ. 

ಲಾರಿ ಶಿರಾ ಕಡೆಯಿಂದ ಹಿರಿಯೂರು ಕಡೆ ಹೋಗುತ್ತಿತ್ತು. ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಿದ್ದಾರೆ.

ಲಕ್ಷ್ಮಿಸಾಗರ, ಚೀಲನಹಳ್ಳಿ, ತಾವರೆಕೆರೆ ಗ್ರಾಮಗಳ ಸುತ್ತಮುತ್ತ ಚಿರತೆ ಕಾಟ ಇದೆ ಎಂಬ ಗ್ರಾಮಸ್ಥರ ದೂರಿನ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಹಿಡಿಯಲು ಬೋನು ಇಟ್ಟಿದ್ದರು.

ಸ್ಥಳಕ್ಕೆ ಭೇಟಿ ನೀಡಿದ ವಲಯ ಅರಣ್ಯಾಧಿಕಾರಿ ರಾಧಾ ಹಾಗೂ ಸಿಬ್ಬಂದಿ ಸ್ಥಳೀಯರಿಂದ ಮಾಹಿತಿ ಪಡೆದರು. ಚಿರತೆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಪಶು ಆಸ್ಪತ್ರೆಗೆ ಸಾಗಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು