ತುಮಕೂರು: ಸಿದ್ಧಗಂಗಾ ಮಠದ ಆವರಣದಲ್ಲಿ ಶನಿವಾರ ರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ.

ಮಠದ ಸ್ಮೃತಿ ವನದ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು ಆವರಣದಲ್ಲಿದ್ದ ನಾಯಿಯೊಂದು ಬೊಗಳಿದ ನಂತರ ಅಲ್ಲಿಂದ ಓಡಿ ಹೋಗಿದೆ. ಚಿರತೆ ಕಾಣಿಸಿಕೊಂಡ ಸ್ಥಳದ ಬಳಿ ಹಾಸ್ಟೆಲ್ಗಳಲ್ಲಿ ನಾಡಿನ ವಿವಿಧೆಡೆಗಳ ಸಾವಿರಾರು ಮಕ್ಕಳು ಇರುತ್ತಾರೆ.

ಭಾನುವಾರ ಬೆಳಗ್ಗೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಮಠದ ಸಿಬ್ಬಂದಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಓಡಾಡಿದ ಸ್ಥಳ ಪರಿಶೀಲಿಸಿದ ನಂತರ ಸೆರೆಗೆ ಬೋನು ಅಳವಡಿಸಿದ್ದಾರೆ.

ಮಠದ ಆವರಣದಲ್ಲಿ ಚಿರತೆ ಕಾಣಿಸಿಕೊಂಡ ಸುದ್ದಿ ಕೇಳಿದ ಬಳಿಕ ಮಠದಲ್ಲಿರುವ ಮಕ್ಕಳು ಮತ್ತು ಸುತ್ತಮುತ್ತಲಿನ ಪ್ರದೇಶದ ಜನರು ಭಯಭೀತರಾಗಿದ್ದಾರೆ.

ಶನಿವಾರ ಬೆಳಗಿನ ಜಾವ ಸಪ್ತಗಿರಿ ಬಡಾವಣೆಯ ಟಿ.ಪಿ.ಕೈಲಾಸಂ ರಸ್ತೆಯಲ್ಲಿ ಚಿರತೆ ಓಡಾಡುತ್ತಿರುವುದು ಹತ್ತಿರದ ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಪ್ತಗಿರಿ ಬಡಾವಣೆ, ಜಯನಗರ ಪ್ರದೇಶಗಳಲ್ಲಿ ಕೂಡ ಶಾಲೆ,ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳು ಹೆಚ್ಚಾಗಿದ್ದು ನಿತ್ಯ ನೂರಾರು ಮಕ್ಕಳು ಓಡಾಡುತ್ತಾರೆ.

‘ನಗರದಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಮಾಹಿತಿ ಇದೆ. ಈಗಾಗಲೇ ಪರಿಶೀಲನೆ ನಡೆಸಿ, ಚಿರತೆ ಸೆರೆಗೆ ಬೋನು ಅಳವಡಿಸಲಾಗಿದೆ’ ಎಂದು ವಲಯ ಅರಣ್ಯಾಧಿಕಾರಿ ನಮಿತಾ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.