ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಪುನಶ್ಚೇತನ ಆದ್ಯತೆಯಾಗಲಿ

Last Updated 26 ಸೆಪ್ಟೆಂಬರ್ 2020, 2:24 IST
ಅಕ್ಷರ ಗಾತ್ರ

ಶಿರಾ: ಆರ್ಥಿಕ ಪುನಶ್ಚೇತನಕ್ಕೆ ಕಾರ್ಮಿಕರಿಗೆ ಪರ್ಯಾಯ ನೀತಿಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಸಿಐಟಿಯು ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಲಾಕ್‌ಡೌನ್‌ನಿಂದಾಗಿ ಸಂಘಟಿತ ಕಾರ್ಮಿಕರಿಗೆ ಪೂರ್ಣ ವೇತನ ಸಿಕ್ಕಿಲ್ಲ. ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಘೋಷಿಸಿದ ಪರಿಹಾರ ದೊರೆಯದೆ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಶೇ 70ರಷ್ಟು ಕಾರ್ಮಿಕರು ಉದ್ಯೋಗ ಕಳೆದುಕೊಂಡು ಜೀವನ ಸಾಗಿಸಲು ಕಷ್ಟಪಡುತ್ತಿದ್ದಾರೆ ಎಂದರು.

ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದಾಗಿ ರೈತರು, ಕಾರ್ಮಿಕರು, ಬಡವರ ಬದುಕು ಬೀದಿಗೆ ಬರುತ್ತದೆ. ಕಾರ್ಮಿಕ ಮತ್ತು ರೈತ ವಿರೋಧಿ ಕಾಯ್ದೆಗಳನ್ನು ಸರ್ಕಾರ ಜಾರಿಗೊಳಿಸಬಾರದು. ಲಾಕ್‌ಡೌನ್ ಸಮಯದಲ್ಲಿ ಸಂತಸ್ತ್ರರಾದವರಿಗೆ ಪರಿಹಾರ ನೀಡುವುದು ಹಾಗೂ ಕಾರ್ಮಿಕರ ಬೇಡಿಕೆ ಈಡೇರಿಸುವುದು ಸರ್ಕಾರದ ಆದ್ಯತೆಯಾಗಬೇಕು ಎಂದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ, ತಾಲ್ಲೂಕು ಕಾರ್ಯದರ್ಶಿ ನಿಸಾರ್ ಅಹಮದ್, ರವೀಶ್, ಕಂಬಣ್ಣ, ರಂಗನಾಥ್, ಕೃಷ್ಣ ಪ್ಪ, ಖಲೀಲ್, ಆನಂದ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT